ಅಂಜಲಿ ನಿಂಬಾಳ್ಕರ್ 
ರಾಜಕೀಯ

ನಾನು ರಾಜೀನಾಮೆ ನೀಡುವ ಮಾತೇ ಆಡಿಲ್ಲ: ಅಂಜಲಿ ನಿಂಬಾಳ್ಕರ್ ಸ್ಪಷ್ಟನೆ

ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಕಳೆದ ಶನಿವಾರ ಕಾಂಗ್ರೆಸ್-ಜೆಡಿಎಸ್ ನ 10 ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ‌ ನೀಡಿದ

ಬೆಂಗಳೂರು: ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಕಳೆದ ಶನಿವಾರ ಕಾಂಗ್ರೆಸ್-ಜೆಡಿಎಸ್ ನ 10 ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ‌ ನೀಡಿದ ಬೆನ್ನಲ್ಲೇ, ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ರಾಜೀನಾಮೆ ನೀಡುತ್ತಾರೆ ಎಂದು ಮಾಧ್ಯಮಗಳು ವರದಿ ಮಾಡುತ್ತಿದ್ದವು. ಆದರೆ ತಾವು ರಾಜೀನಾಮೆ ನೀಡುವುದಾಗಿ ಹೇಳಿಯೇ ಇಲ್ಲ ಎಂದು ಬೆಳಗಾವಿಯ ಖಾನಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್‌ ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.
ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಜಲಿ ನಿಂಬಾಳ್ಕರ್ ರಾಜೀನಾಮೆ ನೀಡುತ್ತಾರೆಂದು ಎಲ್ಲಾ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದೆ. ಆದರೆ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ. ವಿಚಿತ್ರವೆಂದರೆ ನಾನೂ ರಾಜೀನಾಮೆ ನೀಡುತ್ತೇನೆ ಎಂದೂ ಹೇಳಿಯೇ ಇಲ್ಲ ಮತ್ತು ಬಿಜೆಪಿ ನಾಯಕರು ಯಾರೂ ತಮ್ಮನ್ನು ಸಂಪರ್ಕ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
ಐಎಎಂ ವಂಚನೆ ಪ್ರಕರಣ ಬಗ್ಗೆ ತಮಗೆ ಬೆದರಿಕೆ ಹಾಕಲಾಗುತ್ತಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಆ ಬಗ್ಗೆ ನೀವು ಐಜಿಪಿ ಹೇಮಂತ್ ನಿಂಬಾಳ್ಕರ್ ಅವರನ್ನೇ ಕೇಳಿ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT