ರಾಜಕೀಯ

ಬಹುಮತ ಸಾಬೀತಿಗೆ ಸಿಎಂ ಕೇಳಿದಾಗ ಸಮಯ ನಿಗದಿ: ಸ್ಪೀಕರ್ ರಮೇಶ್ ಕುಮಾರ್

Lingaraj Badiger
ಬೆಂಗಳೂರು: ರಾಜ್ಯ ರಾಜಕೀಯ ಬೆಳವಣಿಗೆಗಳು ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಸದನದಲ್ಲಿ ವಿಶ್ವಾಸಮತ ಯಾಚಿಸಲು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ನಿರ್ಧರಿಸಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಸ್ಪೀಕರ್ ರಮೇಶ್ ಕುಮಾರ್ ಅವರು ಬಹುಮತ ಸಾಬೀತಿಗೆ ಮುಖ್ಯಮಂತ್ರಿಗಳು ಕೇಳಿದ ಸಮಯ ನಿಗದಿಪಡಿಸಲಾಗುವುದು ಎಂದು ಹೇಳಿದ್ದಾರೆ.
ಅತಂತ್ರ ಸ್ಥಿತಿಯಲ್ಲಿ ತಾವು ಅಧಿಕಾರಕ್ಕೆ ಅಂಟಿಕೊಂಡು ಕುಳಿತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟವಾಗಿ ಹೇಳಿದ್ದಾರೆ. ಅವರು ಸದನದಲ್ಲಿ ವಿಶ್ವಾಸಮತ ಯಾಚಿಸಲಿದ್ದಾರೆ ಎಂದು ಸ್ಪೀಕರ್ ತಿಳಿಸಿದರು.
ಕಾಂಗ್ರೆಸ್- ಜೆಡಿಎಸ್ ನ 16 ಅತೃಪ್ತ ಶಾಸಕರ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಸರ್ಕಾರ ಅಲ್ಪಮತಕ್ಕೆ ಕುಸಿದಿದ್ದು, ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ಬಿಜೆಪಿ ಒತ್ತಾಯಿಸಿತ್ತಿದೆ.  ಈ ಹಿನ್ನೆಲೆಯಲ್ಲಿ ಸಿಎಂ ಕುಮಾರ್ ಅವರು ಇಂದು ಸದನದಲ್ಲಿ ವಿಶ್ವಾಸಮತ ಯಾಚನೆ ಮಾಡುವುದಾಗಿ ಘೋಷಣೆ ಮಾಡಿದರು.
ಇಂದು ಆರಂಭವಾದ ವಿಧಾನಸಭಾ ಕಲಾಪದಲ್ಲಿ ಸಂತಾಪ ಸೂಚನೆ ನಿರ್ಣಯವಾಗುತ್ತಿದ್ದಂತೆ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಮಾಡುವುದಾಗಿ ಘೋಷಿಸಿದರು. 
ಇದಕ್ಕೆ ಸ್ಪೀಕರ್‌ ಅವರೇ ಸಮಯ ನಿಗದಿಪಡಿಸಲಿ ಎಂದೂ ಮನವಿ ಮಾಡಿದ್ದಾರೆ.
SCROLL FOR NEXT