ಕೋಟಾ ಶ್ರೀನಿವಾಸ್ ಪೂಜಾರಿ 
ರಾಜಕೀಯ

ಜೆಡಿಎಸ್ ಜೊತೆ ಹೋಗಲು ಮಾನಸಿಕವಾಗಿ ಸಿದ್ಧರಿಲ್ಲ: ಕೋಟ ಶ್ರೀನಿವಾಸ ಪೂಜಾರಿ

ಜೆಡಿಎಸ್ ಮುಖಂಡ ಹಾಗೂ ಸಚಿವ ಸಾ.ರಾ. ಮಹೇಶ್ ಜೊತೆ ಕೆ.ಎಸ್. ಈಶ್ವರಪ್ಪ ಭೇಟಿಯಾಗಿದ್ದು ಸಾಂದರ್ಭಿಕ ಮತ್ತು ಆಕಸ್ಮಿಕ. ...

ಬೆಂಗಳೂರು: ಜೆಡಿಎಸ್ ಮುಖಂಡ ಹಾಗೂ ಸಚಿವ ಸಾ.ರಾ. ಮಹೇಶ್ ಜೊತೆ ಕೆ.ಎಸ್. ಈಶ್ವರಪ್ಪ ಭೇಟಿಯಾಗಿದ್ದು ಸಾಂದರ್ಭಿಕ ಮತ್ತು ಆಕಸ್ಮಿಕ. ಇದಕ್ಕೆ ಯಾವುದೇ ಅರ್ಥ ಕಲ್ಪಿಸಬೇಕಿಲ್ಲ ಎಂಬುದನ್ನು ಈಗಾಗಲೇ ಸ್ಪಷ್ಪಪಡಿಸಲಾಗಿದೆ. ಜೆಡಿಎಸ್ ಜೊತೆಗೆ ಹೋಗಲು ನಾವು ಮಾನಸಿಕವಾಗಿ ಸಿದ್ಧರಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದ್ದಾರೆ
ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತಿಹಾಸದಲ್ಲಿ ಮೊದಲ ಬಾರಿಗೆ ಬಹುಮತವಿಲ್ಲದ ಸರ್ಕಾರವನ್ನು ವಿಪಕ್ಷ ಸದನದಲ್ಲಿ ಎದುರಿಸುತ್ತಿದೆ. ಆಡಳಿತ ನಡೆಸಲು ಸರ್ಕಾರಕ್ಕೆ ಅಧಿಕಾರವೇ ಇಲ್ಲ. ಬಹುಮತ ಇಲ್ಲದ ಕಾರಣ ಅವಿಶ್ವಾಸದ ಪ್ರಶ್ನೆಯೇ ಇಲ್ಲ. ಸರ್ಕಾರ ರಾಜೀನಾಮೆ ಕೊಡಬೇಕು ಎಂದು ಅವರು ಒತ್ತಾಯಿಸಿದರು.
ಬಿಜೆಪಿ ರಾಜ್ಯ ಉಸ್ತುವಾರಿ ಕೆ.ಮುರಳೀಧರ ರಾವ್ ಮತ್ತು ಶಾಸಕ ಕೆ.ಎಸ್‌.ಈಶ್ವರಪ್ಪ ಅವರನ್ನು ಜೆಡಿಎಸ್‌ನ ಸಚಿವ ಸಾ.ರಾ.ಮಹೇಶ್‌ ಗುರುವಾರ ರಾತ್ರಿ ನಗರದ ಕುಮಾರಕೃಪಾ ಅತಿಥಿಗೃಹದಲ್ಲಿ ಭೇಟಿಯಾಗಿದ್ದರು. ಇದು ರಾಜಕೀಯ ವಲಯದಲ್ಲಿ ಹಲವು ಊಹಾಪೋಹ, ಚರ್ಚೆಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಶ್ರೀನಿವಾಸ ಪೂಜಾರಿ ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ