ಕುಮಾರಸ್ವಾಮಿ-ಯಡಿಯೂರಪ್ಪ-ಸಿದ್ದರಾಮಯ್ಯ 
ರಾಜಕೀಯ

ಮೈತ್ರಿ ಸರ್ಕಾರಕ್ಕೆ ಮೊದಲ ಯಶಸ್ಸು: ರಾಜಿನಾಮೆ ವಾಪಸ್ ಪಡಿತೀನಿ ಅಂದ ಮಾಜಿ ಸಚಿವ?

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್​ ಅವರ ಮನೆಗೆ ಕಾಂಗ್ರೆಸ್​ನ ಘಟಾನುಘಟಿ ನಾಯಕರು ಮುಂಜಾನೆಯಿಂದ ಮನವೊಲಿಕೆಗೆ ಯತ್ನಿಸಿದ್ದರು.

ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್​ ಅವರ ಮನೆಗೆ  ಕಾಂಗ್ರೆಸ್​ನ ಘಟಾನುಘಟಿ ನಾಯಕರು ಮುಂಜಾನೆಯಿಂದ ಮನವೊಲಿಕೆಗೆ  ಯತ್ನಿಸಿದ್ದರು. ಯಾರಿಗೂ ಬಗ್ಗದ ಎಂಟಿಬಿ ಕೊನೆಗೆ ಸಿದ್ದರಾಮಯ್ಯ ಮುಂದೆ ಮಂಡಿಯೂರಿದ್ದಾರೆ ಎನ್ನಲಾಗಿದೆ.
ಡಿಕೆ ಶಿವಕುಮಾರ್ ಅವರು ಹಲವು ಗಂಟೆಗಳು ನಿರಂತರ ಪ್ರಯತ್ನ ಮಾಡಿ ಎಂಟಿಬಿ ನಾಗರಾಜ್ ಮನವೊಲಿಸಲು ಮುಂದಾಗಿದ್ದರು. ಈ ವೇಳೆಗ ಎಂಟಿಬಿ ಬಗ್ಗದಿದ್ದರಿಂದ ಕೊನೆಗೆ ಸಿದ್ದರಾಮಯ್ಯ ಮನೆಗೆ ಕರೆದುಕೊಂಡು ಹೋಗಲಾಯಿತು. ಅಲ್ಲಿ ಸುಮಾರು 4 ಗಂಟೆಗಳ ಸುದೀರ್ಘ ಚರ್ಚೆ ಬಳಿಕ ಎಂಟಿಬಿ ಹಲವು ಷರತ್ತುಗಳೊಂದಿಗೆ ತಣ್ಣಗಾಗಿದ್ದಾರೆ ಎನ್ನಲಾಗಿದೆ. 
ರಾಜೀನಾಮೆ ಹಿಂಪಡೆಯಲು ಸಮಯಾವಕಾಶ ಕೇಳಿರುವುದಾಗಿ ಹೇಳುವ ಮೂಲಕ ಪಕ್ಷದಲ್ಲೇ ಇರುವ ಸೂಚನೆ ನೀಡಿರುವ ಎಂಟಿಬಿ ನಾಗರಾಜ್, ಸಂಧಾನದ ನಂತರ  ಉಪ ಮುಖ್ಯಮಂತ್ರಿ ಪರಮೇಶ್ವರ್, ಸಚಿವ ಡಿ.ಕೆ ಶಿವಕುಮಾರ್  ಜೊತೆಗೆ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿ ಮಾತುಕತೆ ನಡೆಸಿದರು.
ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿಂದು ಭೇಟಿಯಾದ ಎಂಟಿಬಿ ನಾಗರಾಜ್, ಸಿದ್ದರಾಮಯ್ಯ ಅವರ ಮುಂದೆ ಕೆಲ ಷರತ್ತುಗಳನ್ನು ಇಟ್ಟಿದ್ದಾರೆ ಎಂಬುದು ತಿಳಿದುಬಂದಿದೆ.  ಎಲ್ಲಾ ಷರತ್ತುಗಳಿಗೆ ಸಿದ್ದರಾಮಯ್ಯ  ಒಪ್ಪಿದ್ದು, ಕಾಂಗ್ರೆಸ್ ನಲ್ಲಿಯೇ ಉಳಿಯುವುದಾಗಿ ಎಂಟಿಬಿ ನಾಗರಾಜ್ ಮಾತು ಕೊಟ್ಟಿದ್ದಾರೆ ಎನ್ನಲಾಗಿದೆ.
ಚರ್ಚೆ ವೇಳೆಯಲ್ಲಿ ನನ್ನ ಎದೆ ಬಗೆದರೆ ಸಿದ್ದರಾಮಯ್ಯ ಅವರೇ ಇದ್ದಾರೆ. ರಾಜೀನಾಮೆ ನೀಡಿರುವ ಮತ್ತೋರ್ವ ಶಾಸಕ ಡಾ. ಸುಧಾಕರ್ ಅವರು ರಾಜೀನಾಮೆ ಹಿಂಪಡೆಯುವಂತೆ ಮನವೊಲಿಸುತ್ತೇನೆ  ಎಂದು ಎಂಟಿಬಿ ನಾಗರಾಜ್ ಹೇಳಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT