ಬೆಂಗಳೂರು: ಪ್ರಸ್ತಕ್ತ ರಾಜಕೀಯ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಕೈಯಲ್ಲಿ ಅಧಿಕಾರವಿದೆ. ಅವರು ಏನು ಮಾಡಲು ಹೇಸಲ್ಲ ಎಂದು ಹೇಳುವ ಮೂಲಕ ಸರ್ಕಾರ ಅಧಿಕಾರ ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆ ಎಂದು ಕೇಂದ್ರ ಸಚಿವ ಡಿ ವಿ ಸದಾನಂದಗೌಡ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ನಗರದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ರಾಜಕೀಯದಲ್ಲಿ ಇಷ್ಟು ದೊಡ್ಡ ಅಲ್ಲೋಲ ಕಲ್ಲೋಲ ಉಂಟಾಗಿದೆ. ಈ ಸಮಯದಲ್ಲಿ ಮುಖ್ಯಮಂತ್ರಿ ಅವರು ಅಧಿಕಾರದಲ್ಲಿ ಮುಂದುವರಿಯುವುದು ಸರಿಯಲ್ಲ. ಈ ಅಭಿಪ್ರಾಯ ಅವರಿಂದಲೇ ಬರಬೇಕು ಎಂದರು.
ಮುಖ್ಯಮಂತ್ರಿಗಳ ಮೇಲೆ ನಂಬಿಕೆ ಇಲ್ಲ ಎನ್ನುವುದು ಶಾಸಕರು ಸೇರಿದಂತೆ ಇಡೀ ಜಗತ್ತಿಗೆ ಗೊತ್ತು. ಇನ್ನು ಅವರೇ ವಿಶ್ವಾಸ ಮತಯಾಚನೆ ಮಾಡುವುದರಲ್ಲಿ ಅರ್ಥ ಏನಿದೆ? ಎಂದು ಪ್ರಶ‍್ನಿಸಿದ ಅವರು ಮುಖ್ಯಮಂತ್ರಿ ಅವರು ಕಾಲದೂಡಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics