ಸಿದ್ದರಾಮಯ್ಯ-ಎಂಟಿಬಿ ನಾಗರಾಜ್-ಕುಮಾರಸ್ವಾಮಿ 
ರಾಜಕೀಯ

ಬಿಜೆಪಿಗೆ ತಳಮಳ: ಎಂಟಿಬಿ ನಾಗರಾಜ್ ಮನವೊಲಿಕೆ ಯಶಸ್ವಿ, ನಾಳೆ ರಾಜಿನಾಮೆ ಹಿಂಪಡೆಯುವ ಘೋಷಣೆ

ಯಾರಿಗೂ ಬಗ್ಗದ ಎಂಟಿಬಿ ಕೊನೆಗೆ ಸಿದ್ದರಾಮಯ್ಯ ಮುಂದೆ ಮಂಡಿಯೂರಿದ್ದು ನಾಳೆ ರಾಜಿನಾಮೆ ಹಿಂಪಡೆಯುವುದಾಗಿ ಹೇಳಿದ್ದಾರೆ.

ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್​ ಅವರ ಮನೆಗೆ  ಕಾಂಗ್ರೆಸ್​ನ ಘಟಾನುಘಟಿ ನಾಯಕರು ಮುಂಜಾನೆಯಿಂದ ಮನವೊಲಿಕೆಗೆ  ಯತ್ನಿಸಿದ್ದರು. ಯಾರಿಗೂ ಬಗ್ಗದ ಎಂಟಿಬಿ ಕೊನೆಗೆ ಸಿದ್ದರಾಮಯ್ಯ ಮುಂದೆ ಮಂಡಿಯೂರಿದ್ದು ನಾಳೆ ರಾಜಿನಾಮೆ ಹಿಂಪಡೆಯುವುದಾಗಿ ಹೇಳಿದ್ದಾರೆ.
ಸಿದ್ದರಾಮಯ್ಯ ಅವರ ಮೇಲೆ ನಂಬಿಕೆ ಇಟ್ಟು ನಾನು ಕಾಂಗ್ರೆಸ್ಸಿನಲ್ಲೇ ಉಳಿದುಕೊಳ್ಳುತ್ತೇನೆ. ಇನ್ನು ನಾನು ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ಇಬ್ಬರು ಸೇರಿ ರಾಜಿನಾಮೆ ನೀಡಿದ್ದರಿಂದ ನಾಳೆ ಸುಧಾಕರ್ ಜೊತೆ ಸೇರಿ ರಾಜಿನಾಮೆಯನ್ನು ವಾಪಸ್ ಪಡೆಯುತ್ತೇನೆ. ಕೆಲ ಕಾರಣಾಂತರಗಳಿಂದ ನಾನು ರಾಜಿನಾಮೆ ನೀಡಿದ್ದೆ ಈಗ ನಾನು ಮನಸ್ಸು ಬದಲಿಸಿ ರಾಜಿನಾಮೆ ಪಡೆಯುವುದಾಗಿ ಹೇಳಿದ್ದಾರೆ. 
ಡಿಕೆ ಶಿವಕುಮಾರ್ ಅವರು ಹಲವು ಗಂಟೆಗಳು ನಿರಂತರ ಪ್ರಯತ್ನ ಮಾಡಿ ಎಂಟಿಬಿ ನಾಗರಾಜ್ ಮನವೊಲಿಸಲು ಮುಂದಾಗಿದ್ದರು. ಈ ವೇಳೆಗ ಎಂಟಿಬಿ ಬಗ್ಗದಿದ್ದರಿಂದ ಕೊನೆಗೆ ಸಿದ್ದರಾಮಯ್ಯ ಮನೆಗೆ ಕರೆದುಕೊಂಡು ಹೋಗಲಾಯಿತು. ಅಲ್ಲಿ ಸುಮಾರು 4 ಗಂಟೆಗಳ ಸುದೀರ್ಘ ಚರ್ಚೆ ಬಳಿಕ ಎಂಟಿಬಿ ಹಲವು ಷರತ್ತುಗಳೊಂದಿಗೆ ಎಂಟಿಬಿ ತಣ್ಣಗಾಗಿದ್ದಾರೆ ಎನ್ನಲಾಗಿದೆ. 
ರಾಜೀನಾಮೆ ಹಿಂಪಡೆಯಲು ಸಮಯಾವಕಾಶ ಕೇಳಿರುವುದಾಗಿ ಹೇಳುವ ಮೂಲಕ ಪಕ್ಷದಲ್ಲೇ ಇರುವ ಸೂಚನೆ ನೀಡಿರುವ ಎಂಟಿಬಿ ನಾಗರಾಜ್, ಸಂಧಾನದ ನಂತರ  ಉಪ ಮುಖ್ಯಮಂತ್ರಿ ಪರಮೇಶ್ವರ್, ಸಚಿವ ಡಿ.ಕೆ ಶಿವಕುಮಾರ್  ಜೊತೆಗೆ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿ ಮಾತುಕತೆ ನಡೆಸಿದರು.
ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿಂದು ಭೇಟಿಯಾದ ಎಂಟಿಬಿ ನಾಗರಾಜ್, ಸಿದ್ದರಾಮಯ್ಯ ಅವರ ಮುಂದೆ ಕೆಲ ಷರತ್ತುಗಳನ್ನು ಇಟ್ಟಿದ್ದಾರೆ ಎಂಬುದು ತಿಳಿದುಬಂದಿದೆ.  ಎಲ್ಲಾ ಷರತ್ತುಗಳಿಗೆ ಸಿದ್ದರಾಮಯ್ಯ  ಒಪ್ಪಿದ್ದು, ಕಾಂಗ್ರೆಸ್ ನಲ್ಲಿಯೇ ಉಳಿಯುವುದಾಗಿ ಎಂಟಿಬಿ ನಾಗರಾಜ್ ಮಾತು ಕೊಟ್ಟಿದ್ದಾರೆ ಎನ್ನಲಾಗಿತ್ತು.
ಚರ್ಚೆ ವೇಳೆಯಲ್ಲಿ ನನ್ನ ಎದೆ ಬಗೆದರೆ ಸಿದ್ದರಾಮಯ್ಯ ಅವರೇ ಇದ್ದಾರೆ. ರಾಜೀನಾಮೆ ನೀಡಿರುವ ಮತ್ತೋರ್ವ ಶಾಸಕ ಡಾ. ಸುಧಾಕರ್ ಅವರು ರಾಜೀನಾಮೆ ಹಿಂಪಡೆಯುವಂತೆ ಮನವೊಲಿಸುತ್ತೇನೆ  ಎಂದು ಎಂಟಿಬಿ ನಾಗರಾಜ್ ಹೇಳಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್