ಬಿಎಲ್ ಸಂತೋಷ್ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿಯಾಗಿ ನೇಮಕ: ಈ ಬಗ್ಗೆ ಯಡಿಯೂರಪ್ಪ ಹೇಳಿದ್ದೇನು? 
ರಾಜಕೀಯ

ಬಿಎಲ್ ಸಂತೋಷ್ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿಯಾಗಿ ನೇಮಕ: ಈ ಬಗ್ಗೆ ಯಡಿಯೂರಪ್ಪ ಹೇಳಿದ್ದೇನು?

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ರಾಮಲಾಲ್ ಅವರ ರಾಜೀನಾಮೆಯಿಂದ ತೆರವಾದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನೇಮಕ ಮಾಡಲಾಗಿದೆ.

ನವದೆಹಲಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ರಾಮಲಾಲ್ ಅವರ ರಾಜೀನಾಮೆಯಿಂದ ತೆರವಾದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನೇಮಕ ಮಾಡಲಾಗಿದೆ. 
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಿದ್ದು ತಕ್ಷಣವೇ ಜಾರಿಗೆ ಬಂದಿದೆ. ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ. 
ಬಿಎಲ್ ಸಂತೋಷ್ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿರುವ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ಸಂತೋಷ್ ಅವರ ಪದೋನ್ನತಿ ತಮಗೆ ಅತೀವ ಸಂತಸ ಉಂಟುಮಾಡಿದ್ದು,  ಸಂತೋಷ್ ಅವರು ರಾಜ್ಯ ನಾಯಕರು ಹಾಗೂ ಕಾರ್ಯಕರ್ತರ ನಡುವೆ ಕೊಂಡಿಯಾಗಿ  ರಾಷ್ಟ್ರಮಟ್ಟದಲ್ಲಿ ಕಾರ್ಯನಿರ್ವಹಿಸುವುದರಿಂದ ರಾಜ್ಯದ ಕಾರ್ಯಕರ್ತರಿಗೆ ಅತೀವ ಸಹಾಯವಾಗಲಿದೆ, ಅವರನ್ನು ಉನ್ನತ ಹುದ್ದೆಗೆ ನೇಮಕ ಮಾಡಿರುವುದಕ್ಕೆ ಅಮಿತ್ ಶಾ ಹಾಗೂ ಬಿಜೆಪಿ ಕಾರ್ಯಧ್ಯಕ್ಷ ಜೆಪಿ ನಡ್ಡಾ ಅವರಿಗೂ ನನ್ನ ಅಭಿನಂದನೆಗಳು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಆಗ VOLVO, ಈಗ BMW; ಹಾರುಬೂದಿ ಸಾಗಿಸುತ್ತಿದ್ದ ಲಾರಿ ಉರುಳಿ ಐಶಾರಾಮಿ ಕಾರು ಅಪ್ಪಚ್ಚಿ, Video

ನೀವು ಪೋಪ್ ಆಗಲು ನಾನು ಕಾರಣ, ರಾಜಕಾರಣ ಬಿಟ್ಟು ಧರ್ಮಗುರುವಿನ ಕೆಲಸ ಮಾಡಿ: ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

SCROLL FOR NEXT