ರಾಜಕೀಯ

ಎಚ್ ಡಿಕೆ ವಿಶ್ವಾಸಮತಯಾಚನೆಗೆ ಬಿಜೆಪಿ ಒತ್ತಾಯ:ಬಂಡಾಯ ಕಾಂಗ್ರೆಸ್ ಶಾಸಕರ ಭೇಟಿ

Nagaraja AB
ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರ ರಾಜೀನಾಮೆಯಿಂದಾಗಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಇಂದೇ  ವಿಶ್ವಾಸಮತ ಯಾಚಿಸುವಂತೆ ಬಿಜೆಪಿ ಒತ್ತಾಯಿಸಿದೆ.  ಇದರಿಂದಾಗಿ 13 ತಿಂಗಳ ರಾಜ್ಯ ಮೈತ್ರಿ ಸರ್ಕಾರ ಪತನದ ಹಾದಿಯತ್ತ ಸಾಗಿದೆ.
ಬುಧವಾರ ವಿಶ್ವಾಸಮತ ಯಾಚಿಸುವುದಾಗಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಹಿಂದೆ ಘೋಷಣೆ ಮಾಡಿದ್ದರು. ಆದರೆ, ಕಾಂಗ್ರೆಸ್ ಶಾಸಕರಾದ ಎಂಟಿಬಿ ನಾಗರಾಜ್ ಹಾಗೂ ಮುನಿರತ್ನ ಕೂಡಾ ಮುಂಬೈ ಸೇರಿದ್ದು, ಅತೃಪ್ತ ಗುಂಪಿನಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಮಲ ಪಾಳಯದಲ್ಲಿ ಹೊಸ ಹುರುಪು ಕಂಡುಬಂದಿದ್ದು, ಮುಖ್ಯಮಂತ್ರಿಗಳ ವಿಶ್ವಾಸಮತಯಾಚನೆಗೆ ಪಟ್ಟು ಹಿಡಿದಿದೆ.
ಈ ಮಧ್ಯೆ ಮೈತ್ರಿ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಸರ್ಕಾರ ಅಲ್ಪಮತಕ್ಕೆ  ಕುಸಿಯದಂತೆ  ಆಡಳಿತಾರೂಢ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ.
ಸ್ಪೀಕರ್ ರಾಜೀನಾಮೆ ಸ್ವೀಕರಿಸಲು ನಿರ್ದೇಶಿಸುವಂತೆ ಅತೃಪ್ತ ಶಾಸಕರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್ , ರಾಜೀನಾಮೆ ಅಂಗೀಕಾರ ಅಥವಾ ಶಾಸಕರ ಅನರ್ಹತೆ ಮಾಡದೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸ್ಪೀಕರ್ ಅವರಿಗೆ ನಿರ್ದೇಶಿಸಿದೆ. ಈ ಹಿನ್ನೆಲೆಯಲ್ಲಿ ಇಂದು ಹಾಗೂ ನಾಳಿನ ರಾಜ್ಯ ರಾಜಕೀಯ ವಿದ್ಯಮಾನಗಳು ತೀವ್ರ ಕುತೂಹಲ ಕೆರಳಿಸಿವೆ.
SCROLL FOR NEXT