ರಾಜಕೀಯ

ಕರ್ನಾಟಕ ಬಿಕ್ಕಟ್ಟು: ಐವರು ಅತೃಪ್ತ ಶಾಸಕರ ಮನವಿ ಆಲಿಸಲು ಸುಪ್ರೀಂ ಅಸ್ತು

Raghavendra Adiga
ನವದೆಹಲಿ: ರಾಜ್ಯದ ಅತೃಪ್ತ ಶಾಸಕರ ರಾಜೀನಾಮೆ ವಿಚಾರವಾಗಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದೆ.
ರಾಜ್ಯದ ಶಾಸಕರಾದ ಮುನಿರತ್ನ, ಎಂಟಿಬಿ ನಾಗರಾಜ್, ಆನಂದ್ ಸಿಂಗ್, ಡಾ. ಕೆ.ಸುಧಾಕರ್ ಹಾಗೂ ರೋಷನ್ ಬೇಗ್ ಅವರುಗಳು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗಾಗಿ ಸುಪ್ರೀಂ ಕೋರ್ಟ್ ಅಂಗೀಕರಿಸಿದೆ.
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ನ್ಯಾಯಪೀಠವು ಬಂಡಾಯ ಶಾಸಕರ ಪರವಾಗಿ ಹಾಜರಾದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರ ಮನವಿಯನ್ನು  ಅಂಗೀಕರಿಸಿದೆ.
ಇದೇ ವೇಳೆ ಉಳಿದ ಶಾಸಕರ ಅರ್ಜಿಯನ್ನು ನಾಳೆ ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ನ್ಯಾಯಾಲಯ ಹೇಳಿದೆ. 
ಸ್ಪೀಕರ್ ತಮ್ಮ ರಾಜೀನಾಮೆಯನ್ನು ಸ್ವೀಕರಿಸದಿರುವ ಬಗೆಗೆ ವಿರೋಧ ವ್ಯಕ್ತಪಡಿಸಿ ಹತ್ತು ಶಾಸಕರೊಡನೆ ರಾಜ್ಯದ ಇನ್ನೂ ಐವರು ಶಾಸಕರು ಜುಲೈ 13 ರಂದು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಆಡಳಿತಾರೂಢ ಕಾಂಗ್ರೆಸ್-ಜೆಡಿಎಸ್ ಒಕ್ಕೂಟದ 10 ಬಂಡಾಯ ಶಾಸಕರ ರಾಜೀನಾಮೆ ಮತ್ತು ಅನರ್ಹತೆ ಕುರಿತು ಜುಲೈ 16 ರವರೆಗೆ ಕರ್ನಾಟಕ ಸ್ಪೀಕರ್ ಕೆ ಆರ್ ರಮೇಶ್ ಕುಮಾರ್ಯಾವುದೇ ನಿರ್ಧಾರ ತೆಗೆದುಕೊಳ್ಳದಂತೆ ಸುಪ್ರೀಂ ಕೋರ್ಟ್ ನಿರ್ಬಂಧಿಸಿತ್ತು.
ಏತನ್ಮಧ್ಯೆ 14 ಬಂಡಾಯ ಶಾಸಕರು ಪೊವಾಯಿ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿಗಳಿಗೆ  ಕರ್ನಾಟಕ ಮತ್ತು ಮಹಾರಾಷ್ಟ್ರ ಕಾಂಗ್ರೆಸ್ ನ ಹಿರಿಯ ನಾಯಕರಾದ ಮಲ್ಲಿಕರ್ಜುನ್ ಖರ್ಗೆ ಮತ್ತು ಗುಲಾಮ್ ನಬಿ ಆಜಾದ್ ಅವರಿಂದ ತಮಗೆ "ಬೆದರಿಕೆ" ಇರುವುದಾಗಿ ದೂರು ಸಲ್ಲಿಸಿದ್ದಾರೆ.
SCROLL FOR NEXT