ರಾಜಕೀಯ

ಮುಂಬೈನಲ್ಲಿರುವ ಅತೃಪ್ತ ಶಾಸಕರು ವಿಶ್ವಾಸಮತ ಯಾಚನೆ ದಿನ ಅಧಿವೇಶನಕ್ಕೆ ಗೈರು?

Lingaraj Badiger
ಮುಂಬೈ: ಮೈತ್ರಿ ಸರ್ಕಾರದ ವಿರುದ್ಧ ಬಂಡಾಯ ಎದ್ದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಕಾಂಗ್ರೆಸ್‌ ಹಾಗೂ ಜೆಡಿಎಶ್ ನ ಅತೃಪ್ತ ಶಾಸಕರು ಗುರುವಾರ ನಡೆಯಲಿರುವ ವಿಶ್ವಾಸಮತ ಯಾಚನೆಯ ವೇಳೆ ವಿಧಾನಸಭೆಗೆ ಗೈರು ಆಗುವ ಸಾಧ್ಯತೆ ಇದೆ.
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಜುಲೈ18ಕ್ಕೆ ಸದನದಲ್ಲಿ ವಿಶ್ವಾಸಮತ ಯಾಚನೆ ಮಾಡಲಿದ್ದು, ಅಂದು ಮುಂಬೈನ ಐಷಾರಾಮಿ ಹೋಟಲ್ ನಲ್ಲಿ ತಂಗಿರುವ ಅತೃಪ್ತ ಶಾಸಕರು ಬೆಂಗಳೂರಿಗೆ ಆಗಮಿಸುವ ಸಾಧ್ಯತೆಗಳು ತೀರಾ ಕಡಿಮೆ ಎಂದು ಹೇಳಲಾಗುತ್ತಿದೆ.
ಈಗಾಗಲೇ ಎಲ್ಲ ಅತೃಪ್ತ ಶಾಸಕರು ಸ್ಪೀಕರ್‌ ರಮೇಶ್‌ ಕುಮಾರ್‌ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ, ವಿಶ್ವಾಸಮತ ಯಾಚನೆಯ ವೇಳೆ ಸದನಕ್ಕೆ ಆಗಮಿಸುವ ಯಾವುದೇ ಅಗತ್ಯವಿಲ್ಲ ಎಂದು ಮೂಲಗಳು ತಿಳಿಸಿವೆ.ಟ
ಈ ಮಧ್ಯೆ, ರಾಜೀನಾಮೆ ಶೀಘ್ರ ಅಂಗೀಕಾರ ಕೋರಿ ಶಾಸಕರು ಸಲ್ಲಿಸಿರುವ ಅರ್ಜಿ ಕುರಿತು ಮಂಗಳವಾರ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದೆ. 
ಇದಲ್ಲದೆ ಇನ್ನೂ ಮೂರ್ನಾಲ್ಕು ಮಂದಿ ಶಾಸಕರು ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದು ಬಂದಿದೆ.
SCROLL FOR NEXT