ರಮೇಶ್ ಕುಮಾರ್-ಮಾಧುಸ್ವಾಮಿ 
ರಾಜಕೀಯ

ನೀವು ನನಗೆ ಆರ್ಡರ್ ಮಾಡಬೇಡಿ: ಬಿಜೆಪಿ ಶಾಸಕ ಮಾಧುಸ್ವಾಮಿ ವಿರುದ್ಧ ಸ್ಪೀಕರ್ ಗರಂ

ಮುಖ್ಯಮಂತ್ರಿ ಕುಮಾರಸ್ವಾಮಿ ವಿಶ್ವಾಸ ಮತಯಾಚನೆ ವಿಳಂಬವಾಗುತ್ತಿದ್ದಂತೆ ಸದನದಲ್ಲಿ ಬಿಜೆಪಿ ಶಾಸಕ ಮಾಧುಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದು...

ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ವಿಶ್ವಾಸ ಮತಯಾಚನೆ ವಿಳಂಬವಾಗುತ್ತಿದ್ದಂತೆ ಸದನದಲ್ಲಿ ಬಿಜೆಪಿ ಶಾಸಕ ಮಾಧುಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದು ವಿನಾಃ ಕಾರಣ ಕಾಲಾಹರಣವಾಗುತ್ತಿದೆ ಕೂಡಲೇ ಕುಮಾರಸ್ವಾಮಿ ಅವರು ವಿಶ್ವಾಸ ಮತಯಾಚನೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು. ಈ ವೇಳೆ ಗರಂ ಆದ ಸ್ಪೀಕರ್ ರಮೇಶ್ ಕುಮಾರ್ ಅವರು ನೀವು ನನಗೆ ಆರ್ಡರ್ ಮಾಡಬೇಡಿ ಎಂದು ಹೇಳಿದರು. 
ವಿಧಾನಸಭೆಯಲ್ಲಿ ಇಂದು ಕುಮಾರಸ್ವಾಮಿ ವಿಶ್ವಾಸ ಮತಯಾಚನೆ ಮೇಲೆ ಚರ್ಚೆ ನಡೆಯುತ್ತಿತ್ತು. ಈ ವೇಳೆ ಕಾಂಗ್ರೆಸ್ ಶಾಸಕರು ಒಬ್ಬರೇ ತಮ್ಮ ಅಭಿಪ್ರಾಯವನ್ನು ಮಂಡಿಸುತ್ತಿದ್ದರು. ಈ ಮಧ್ಯೆ ಕಾನೂನು ಸಂಘರ್ಷ ಉದ್ಭವವಾಗಿ ಕುಮಾರಸ್ವಾಮಿ ವಿಶ್ವಾಸ ಮತಕ್ಕೆ ಹಾಕುವುದು ಮುಂದೆ ಹೋಗುತ್ತಿದ್ದಂತೆ ಬಿಜೆಪಿ ಶಾಸಕರು ಆಕ್ರೋಶಗೊಂಡರು. 
ಈ ವೇಳೆ ಸದನದಲ್ಲಿ ಎದ್ದು ಮಾತನಾಡಿದ ಮಾಧುಸ್ವಾಮಿ ಅವರು ಸ್ಪೀಕರ್ ಅವರಿಗೆ ನೇರವಾಗಿ ಪ್ರಶ್ನೆ ಮಾಡಿದರು. ವಿಶ್ವಾಸ ಮತಕ್ಕೆ ಹಾಕಲು ಕುಮಾರಸ್ವಾಮಿ ಅವರಿಗೆ ಸೂಚಿಸಿ ಎಂದು ಹೇಳಿದರು. ಈ ವೇಳೆ ಆಕ್ರೋಶಗೊಂಡ ಸ್ಪೀಕರ್ ರಮೇಶ್ ಕುಮಾರ್ ಅವರು ನೀವು ನನಗೆ ಆರ್ಡರ್ ಮಾಡಬೇಡಿ. ಏನು ಮಾಡಬೇಕು ಎಂದು ನನಗೆ ಗೊತ್ತು  ಎಂದು ಕೋಪದಲ್ಲೇ ಮಾತನಾಡಿದರು. ಕಾನೂನು ಸಂಘರ್ಷ ಉದ್ಭವವಾದ ಹಿನ್ನೆಲೆಯಲ್ಲಿ ಅಟಾರ್ನಿ ಜನರಲ್ ಜೊತೆ ಮಾತನಾಡಬೇಕು ಎಂದು ಸ್ಪೀಕರ್ ಕಲಾಪವನ್ನು ಅರ್ಧ ಗಂಟೆ ಮುಂದಕ್ಕೆ ಹಾಕಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Video: ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಅಮೆರಿಕ ದಾಳಿ; ಕನಿಷ್ಠ 87 ನಾವಿಕರು ಸಾವು

T20 World Cup 2026: Allen ದಾಖಲೆ ಶತಕ; ಅಜೇಯ ಆಫ್ರಿಕಾ ಮಣಿಸಿ ಫೈನಲ್‌ಗೆ ಲಗ್ಗೆ ಇಟ್ಟ ನ್ಯೂಜಿಲ್ಯಾಂಡ್!

'ನರಕ.. ಇರಾನ್ ಅಲ್ಲದವರಾದ್ರೆ ಮುಚ್ಕೊಂ*ರಿ': Khamenei ಸಾವಿಗೆ ಅಳುವ ಭಾರತೀಯ ಮುಸ್ಲಿಂ ಮಹಿಳೆಯರ ಲೇವಡಿ ಮಾಡಿದ ಇರಾನ್ ಮಹಿಳೆಯರು!

ಸೌದಿ ಅರೇಬಿಯಾ ಮೇಲೆ ದಾಳಿ ಬೇಡ: ನಾವು ಯುದ್ಧಕ್ಕೆ ಇಳಿಯಬೇಕಾಗುತ್ತೆ; ಇರಾನ್‌ಗೆ ಪಾಕಿಸ್ತಾನ ನೇರ ಧಮ್ಕಿ!

ವಾಣಿಜ್ಯ, ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಶಾಕ್; ಆದ್ರೆ ರೈತರಿಗೆ ಗುಡ್ ನ್ಯೂಸ್!

SCROLL FOR NEXT