ಎಚ್ ಡಿ ರೇವಣ್ಣ 
ರಾಜಕೀಯ

ವಿಶ್ವಾಸಮತ ಚರ್ಚೆ: ವಿಧಾನಸೌಧಕ್ಕೆ ಬರಿಗಾಲಲ್ಲೇ ಬಂದ ಹೆಚ್ ಡಿ ರೇವಣ್ಣ- ವಿಡಿಯೋ

ನಿಂಬೆಹಣ್ಣ ಹಿಡಿದು ಸುದ್ದಿಯಾಗಿದ್ದ ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಈಗ ವಿಶ್ವಾಸಮತ ಚರ್ಚೆಯಲ್ಲಿ ಪಾಲ್ಗೊಳ್ಳಲು ವಿಧಾಸೌಧಕ್ಕೆ ಬರಿಗಾಲಲ್ಲೇ ಬಂದು ಮತ್ತೊಮ್ಮೆ ಸುದ್ದಿಯಾಗಿದ್ದಾರೆ.

ಬೆಂಗಳೂರು: ನಿಂಬೆಹಣ್ಣ ಹಿಡಿದು ಸುದ್ದಿಯಾಗಿದ್ದ ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಈಗ ವಿಶ್ವಾಸಮತ ನಿರ್ಣಯ ಕುರಿತ ಚರ್ಚೆಯಲ್ಲಿ ಪಾಲ್ಗೊಳ್ಳಲು ವಿಧಾಸೌಧಕ್ಕೆ ಬರಿಗಾಲಲ್ಲೇ ಬಂದು  ಮತ್ತೊಮ್ಮೆ ಸುದ್ದಿಯಾಗಿದ್ದಾರೆ.
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ವಿಶ್ವಾಸಮತದ ಮೇಲಿನ ಚರ್ಚೆ ನಡೆಯುತ್ತಿದ್ದು, ಸರ್ಕಾರವನ್ನು ಉಳಿಸಿಕೊಳ್ಳಲು ಮೈತ್ರಿ ನಾಯಕರು ತೀವ್ರ ಕಸರತ್ತು ನಡೆಸುತ್ತಿದ್ದಾರೆ. 
 ಈ ಚರ್ಚೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಎಚ್ ಡಿ ರೇವಣ್ಣ ಬರಿಗಾಲಲ್ಲೇ ವಿಧಾನಸೌಧಕ್ಕೆ ಬಂದಿರುವ ವಿಡಿಯೋ ವೈರಲ್ ಆಗಿದೆ. ಹಲವು ಬಾರಿ ಬರಿಗಾಲಲ್ಲಿ ದೇಗುಲಗಳಿಗೆ ಭೇಟಿ ನೀಡುತ್ತಿದ್ದ ರೇವಣ್ಣ, ಸದನಕ್ಕೂ ಬರಿಗಾಲಲ್ಲಿ ಆಗಮಿಸುವ ಮೂಲಕ ಗಮನ ಸೆಳೆದಿದ್ದಾರೆ. 
ದೇವರ ಮೇಲಿನ ಅಪಾರ ನಂಬಿಕೆ ಹೊಂದಿರುವ ಎಚ್ ಡಿ ರೇವಣ್ಣ, ಮೈತ್ರಿ ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹರಕೆಯ ಮೊರೆ ಹೋಗಿದ್ದಾರೆಯೇ ಎಂಬಂತಹ ಮಾತುಗಳು ಕೇಳಿಬರುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!