ಸಿಎಂ ಕುಮಾರಸ್ವಾಮಿ 
ರಾಜಕೀಯ

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರು ರೇವಣ್ಣ ಅವರ ನಿಂಬೆಹಣ್ಣಿನ ಬಗ್ಗೆ ಮಾತನಾಡುತ್ತಾರೆ: ರೇಣುಕಾಚಾರ್ಯ ಕಾಲೆಳೆದ ಸಿಎಂ

ಅಂದು ಯಡಿಯೂರಪ್ಪ ವಿರುದ್ದ ಕುತಂತ್ರ ನಡೆಸಿದವರು ಇಂದು ಅದೇ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಮಾಡಲು ಶಾಸಕರನ್ನು ಕಟ್ಟಿ ಹಾಕುತ್ತಿದ್ದಾರೆ ಎಂದು ...

ಬೆಂಗಳೂರು: ಅಂದು ಯಡಿಯೂರಪ್ಪ ವಿರುದ್ದ ಕುತಂತ್ರ ನಡೆಸಿದವರು ಇಂದು  ಅದೇ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಮಾಡಲು ಶಾಸಕರನ್ನು ಕಟ್ಟಿ ಹಾಕುತ್ತಿದ್ದಾರೆ ಎಂದು ಹೇಳುವ ಮೂಲಕ ಸಿಎಂ ಕುಮಾರಸ್ವಾಮಿ, ಮಾಜಿ ಸಚಿವ ರೇಣುಕಾಚಾರ್ಯ ಕಾಲೆಳೆದಿದ್ದಾರೆ.
ವಿಧಾನಸಭೆ ಕಲಾಪದಲ್ಲಿ ಮಾತನಾಡಿದ ಸಿಎಂ ಕುಮಾರಸ್ವಾಮಿ, ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿಯವರು ರೇವಣ್ಣ ಕೈಯ್ಯಲ್ಲಿ ಹಿಡಿದುಕೊಳ್ಳುವ ನಿಂಬೆಹಣ್ಣಿನ ಬಗ್ಗೆ ಮಾತನಾಡುತ್ತಾರೆ ಎಂದು ಲೇವಡಿ ಮಾಡಿದ್ದಾರೆ.
ನಾವು ದೇವರನ್ನು ನಂಬುವರು, ಹೀಗಿರುವಾಗ ರೇವಣ್ಣ ಪ್ರತಿದಿನ ದೇವಾಸ್ಥಾನಕ್ಕೆ ಹೋಗಿ ಬರುತ್ತಾರೆ, ಅಲ್ಲಿ ನಿಂಬೆಹಣ್ಣು ಕೊಡುತ್ತಾರೆ ಅದಕ್ಕೆ ವಿಶೇಷ ಅರ್ಥ ಕಲ್ಪಿಸುತ್ತಾರೆ. ಮಾಟ ಮಂತ್ರ ಮಾಡಿಸಿಕೊಂಡು ಬರುತ್ತಾರೆ ಎಂದು ಹೇಳುತ್ತಾರೆ.
ಮಾಟ ಮಂತ್ರದಿಂದ ಸರ್ಕಾರ ಉಳಿಸಿಕೊಳ್ಳಲು ಸಾಧ್ಯವಿಲ್ಲ, ನಮ್ಮದು ಮಾಟ ಮಂತ್ಕದ ವಂಶವಲ್ಲ, ಇದು ದೇವರು ಕೊಟ್ಟ ಪದವಿ, ಅಧಿಕಾರ ಯಾವತ್ತೂ ಮುಖ್ಯವಲ್ಲ, ನಾನು ಅಧಿಕಾರಕ್ಕೆ ಅಂಟಿಕೊಂಡು ಕುಳಿತಿಲ್ಲ, ಇಂದು ನಾನು, ನಾಳೆ ನಿಮ್ಮದು ಇದೇ ಪರಿಸ್ಥಿತಿ, ಇತಿಹಾಸದಲ್ಲಿ ಇಂಥ ಘಟನೆ ಮರುಕಳಿಸಬಾರದು ಎಂದು ಹೇಳಿದ್ದಾರೆ.
ದೇಶದಲ್ಲಿ ಕೆಟ್ಟ ವಾತಾವರಣ ನಿರ್ಮಿಸಲು ಹೊರಟಿದ್ದೀರಿ, ನಿಮಗೂ ಮುಂದೆ ಕಾದಿದೆ ಮಾರಿಹಬ್ಬ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಕೋಟಿ ಕೋಟಿ ಲೂಟಿ: ಅರಣ್ಯ ಇಲಾಖೆ ಮಾಜಿ ಅಧಿಕಾರಿಗೆ ಕೋರ್ಟ್ ಶಾಕ್; ಬರೋಬ್ಬರಿ 1.38 ಕೋಟಿ ದಂಡ, 3 ವರ್ಷ ಜೈಲು ಶಿಕ್ಷೆ..!