ರಾಜಕೀಯ

ಪ್ರತಿಪಕ್ಷದ ನಾಯಕ ಸ್ಥಾನಕ್ಕೆ ಕಾಂಗ್ರೆಸ್ ನಾಯಕರಲ್ಲಿ ಪೈಪೋಟಿ

Sumana Upadhyaya
ಬೆಂಗಳೂರು: ಮೈತ್ರಿ ಸರ್ಕಾರ ಪತನವಾಗಿ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿಯಲು ತಯಾರಿ ನಡೆಸುತ್ತಿದೆ. ಮತ್ತೊಂದೆಡೆ ಕಾಂಗ್ರೆಸ್ ಪಾಳೆಯದಲ್ಲಿ ಈಗ ಪ್ರತಿಪಕ್ಷದ ನಾಯಕ ಸ್ಥಾನಕ್ಕೆ ಪೈಪೋಟಿ ಶುರುವಾಗಿದೆ.
ಸರ್ಕಾರ ಪತನದ ಬಳಿಕ ಸಂಖ್ಯಾಬಲದ ಆಧಾರದ ಮೇಲೆ ಕಾಂಗ್ರೆಸ್ ವಿಧಾನ ಸಭೆಯಲ್ಲಿ ಪ್ರತಿಪಕ್ಷ ಸ್ಥಾನ ಸಿಗುವುದು ಖಚಿತವಾಗಿದೆ.ಆದರೆ ಒಂದು ಸ್ಥಾನಕ್ಕಾಗಿ ನಾಲ್ಕು ಪ್ರಮುಖ ಘಟನಾನುಘಟಿ ನಾಯಕರು ಪೈಪೋಟಿಗೆ ಬಿದ್ದಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ವಿರೋಧ ಪಕ್ಷದ ನಾಯಕರಾಗಲಿದ್ದಾರೆ ಎಂಬುದು ಕಾಂಗ್ರೆಸ್ ಶಾಸಕರ ಲೆಕ್ಕಚಾರ.ಆದರೆ ಈ ಲೆಕ್ಕಾಚಾರವನ್ನು ಮೀರಿಯೂ ಮಾಜಿ ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್,ಮಾಜಿ ಸಚಿವ ಡಿಕೆ ಶಿವಕುಮಾರ್,ಮಾಜಿ ಸಚಿವ ಎಚ್ ಕೆ ಪಾಟೀಲ್ ವಿಪಕ್ಷ ನಾಯಕ ಸ್ಥಾನಕ್ಕಾಗಿ ತಮ್ಮ ಬೆಂಬಲಿಗರ ಜೊತೆ ಸಭೆ ನಡೆಸಿ ಚರ್ಚೆ ನಡೆಸುತ್ತಿದ್ದಾರೆ.
SCROLL FOR NEXT