ರಾಜಕೀಯ

'ಸೇಡಿನ ರಾಜಕಾರಣ ಮಾಡಲ್ಲ, ಪಾರದರ್ಶಕ ಆಡಳಿತ- ಮುಖ್ಯಮಂತ್ರಿ ಯಡಿಯೂರಪ್ಪ

ನೂತನ ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಸೇಡಿನ ರಾಜಕಾರಣ ಮಾಡುವುದಿಲ್ಲ ಎಂದು ನೂತನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರು: ನೂತನ ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ  ಸೇಡಿನ ರಾಜಕಾರಣ ಮಾಡುವುದಿಲ್ಲ ಎಂದು ನೂತನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ಬಿಜೆಪಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಆಡಳಿತದಲ್ಲಿ ಬದಲಾವಣೆ ತರುತ್ತೇವೆ.ಸೇಡಿನ ರಾಜಕಾರಣ ಮಾಡಲ್ಲ, ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೇಂದ್ರ ಸರ್ಕಾರದ ಬೆಂಬಲದೊಂದಿಗೆ ಉತ್ತಮ ಆಡಳಿತ ನೀಡುವುದಾಗಿ ಭರವಸೆ ನೀಡಿದರು.
ಹಿಂದಿನ ಮೈತ್ರಿ ಸರ್ಕಾರದ ಅವಧಿಯಲ್ಲಿ ತುಘಲಕ್ ದರ್ಬಾರ್ ನಡೆಸಲಾಗುತಿತ್ತು. ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿತ್ತು ಎಂದು ಆರೋಪಿಸಿದರು.ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವಲ್ಲಿ ಪಕ್ಷದ ಕಾರ್ಯಕರ್ತರ ಪಾತ್ರ ಮಹತ್ವದಾಗಿತ್ತು, ಪ್ರಾಮಾಣಿಕ ರೀತಿಯಲ್ಲಿ ಆಡಳಿತ ನೀಡುವುದಾಗಿ ಭರವಸೆ ನೀಡಿದರು. 
ರೈತರು, ಮೀನುಗಾರರು, ಬುಡುಕಟ್ಟು ಸಮುದಾಯ, ನೇಕಾರರು ಹಾಗೂ ಪಕ್ಷದ ಅಸಂಖ್ಯಾತ ಕಾರ್ಯಕರ್ತರು ಹೊಸ ಸರ್ಕಾರದ ಮೇಲೆ ಬಹಳಷ್ಟು ನಿರೀಕ್ಷೆ ಇಟ್ಟುಕೊಂಡಿದ್ದು, ಅವರ ನಿರೀಕ್ಷೆಗಳನ್ನು ಹುಸಿಮಾಡಲ್ಲ ಎಂದು ಯಡಿಯೂರಪ್ಪ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಆಯೋಗದ ವಿವಾದ: CEC Gyanesh Kumar ಭಾಗಿಯಾಗಬೇಕಿದ್ದ ಯುವಕರೊಂದಿಗಿನ ಕಾರ್ಯಕ್ರಮ ದಿಢೀರ್ ರದ್ದು!

'ಯಾರು ಚಿತ್ರೀಕರಿಸುತ್ತಿದ್ದರು?': ಜಮುಯಿ ದುರಂತಕ್ಕೆ ವಿಪಕ್ಷಗಳೇ ಕಾರಣ-ಬಿಜೆಪಿ ಸಚಿವ

ವಿಶ್ವಸಂಸ್ಥೆ ಸುಧಾರಣೆ ವಿರೋಧಿಸುವವರಿಗೆ ಜಾಗತಿಕ ವೇದಿಕೆ ಬಗ್ಗೆ ಕಾಳಜಿಯಿಲ್ಲ, ಕೇವಲ ಸ್ವಾರ್ಥಕ್ಕೆ ಬಳಕೆ: ಎಸ್. ಜೈಶಂಕರ್ ವಾಗ್ದಾಳಿ

ಬಿಹಾರದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ? ಮಂದಾರ್ ಬೆಟ್ಟದಲ್ಲಿ ಯುವತಿಗೆ ಕಾಮುಕರಿಂದ ಕಿರುಕುಳ; ಒಂದೇ ವಾರದಲ್ಲಿ 3ನೇ ಪ್ರಕರಣ..!

ಸಿಕ್ಕಿಂನಲ್ಲಿ ವರುಣನ ಆರ್ಭಟ: Rimbi ಗ್ರಾಮದಲ್ಲಿ ಭೀಕರ ಭೂಕುಸಿತ; ಹಲವು ಮನೆಗಳು, ಸರ್ಕಾರಿ ವಸತಿ ಗೃಹಗಳು ಧ್ವಂಸ..!