ರಾಜಕೀಯ

ಇಂದೇ ಯಡಿಯೂರಪ್ಪ ಪಟ್ಟಾಭಿಷೇಕ: ಸಂಜೆ 6 ಗಂಟೆಗೆ ಬಿಎಸ್ ವೈ ಪ್ರಮಾಣ ವಚನ

Shilpa D
ಬೆಂಗಳೂರು: ಇಂದು ರಾಜಭವನಕ್ಕೆ ತೆರಳಿದ್ದ ಮಾಜಿ ಸಿಎಂ ಯಡಿಯೂರಪ್ಪ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ಮಂಡಿಸಲು ಹಕ್ಕು ಮಂಡಿಸಿದ್ದಾರೆ.
ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತನಾಡಿದ ಯಡಿಯೂರಪ್ಪ, ನಾನು ಪ್ರತಿಪಕ್ಷ ನಾಯಕನಾಗಿರುವ ಕಾರಣ ಮತ್ತೆ ಶಾಸಕಾಂಗ ಪಕ್ಷದ ಸಭೆ ನಡೆಸುವ ಅಗತ್ಯತೆ ಇಲ್ಲ ಎಂದು ಹೇಳಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಸೂಚನೆ ಮೇರೆಗೆ ಯಡಿಯೂರಪ್ಪ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದಾರೆ, ಇಂದೇ ಪ್ರಮಾಣವಚನ ಸ್ವೀಕರಿಸಲು ಅವಕಾಶ ಕೋರಿದ್ದಾರೆ.
ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಯ ಹಕ್ಕು ಮಂಡಿಸಲು ಮನವಿ ಸಲ್ಲಿಸಿದ್ದಾರೆ.. ಇಂದು ಯಡಿಯೂರಪ್ಪ ಒಬ್ಬರು ಮಾತ್ರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ, ಅದಕ್ಕಾಗಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಸಂಜೆ 6 ಕ್ಕೆ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜಭವನಕ್ಕೆ ತೆರಳುವ ಮುಂಚೆ ಯಡಿಯೂರಪ್ಪ ತಮ್ಮ ನಿವಾಸದ ಬಳಿಯಿರುವ ಆಂಜನೇಯ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
SCROLL FOR NEXT