ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ಬಿಜೆಪಿ ಜೊತೆಗೆ ಸಂಬಂಧ ಬೆಸೆಯುವ ಸುದ್ದಿಗಳು ಆಧಾರ ರಹಿತ- ಕುಮಾರಸ್ವಾಮಿ

ಬಿಜೆಪಿ ಜೊತೆಗೆ ಸಂಬಂಧ ಬೆಸೆಯುವ ಸುದ್ದಿಗಳು ಆಧಾರ ರಹಿತವಾಗಿವೆ. ಸತ್ಯಕ್ಕೆ ಧೂರವಾದ ಈ ರೀತಿಯ ಊಹಾಪೋಹಗಳಿಗೆ ಪಕ್ಷದ ಶಾಸಕರು ಹಾಗೂ ಕಾರ್ಯಕರ್ತರು ಕಿವಿಗೊಡಬೇಕಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಎಚ್ ಡಿ ಕುಮಾರಸ್ವಾಮಿ
Nagaraja AB
Updated On : 27 Jul 2019, 10:03 am
ಬೆಂಗಳೂರು: ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಸರ್ಕಾರ ಪತನದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ದಿನಕ್ಕೊಂದು ರೀತಿಯಲ್ಲಿ ಬೆಳವಣಿಗೆಯಾಗುತ್ತಿದ್ದು, ಜೆಡಿಎಸ್ ಬಿಜೆಪಿ ಜೊತೆಗೆ ಮತ್ತೆ ಸಂಬಂಧ ಬೆಸೆಯುವ ಸುದ್ದಿಗಳು ಕೇಳಿಬರುತ್ತಿವೆ.
ಬಿಜೆಪಿಗೆ ಜೆಡಿಎಸ್ ಬಾಹ್ಯ ಬೆಂಬಲ ನೀಡುವುದಾಗಿ ಮಾಜಿ ಸಚಿವ ಜಿ. ಟಿ ದೇವೇಗೌಡ ಹೇಳಿಕೆ ನೀಡಿದ್ದ ಬೆನ್ನಲ್ಲೇ ಈ ಕುರಿತ ಊಹಾಪೋಹಗಳಿಗೆ ಮತ್ತಷ್ಟು ರೆಕ್ಕೆ ಪುಕ್ಕ ಬಂದಂತಾಗಿದೆ. 
 ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ  ಜೆಡಿಎಸ್ ಪಕ್ಷದ ಶಾಸಕರ ಸಭೆಯಲ್ಲಿ ಕಾಂಗ್ರೆಸ್ ಜೊತೆಗಿನ ಮೈತ್ರಿಗೆ ಎಳ್ಳುನೀರು ಬಿಟ್ಟು, ಬಿಜೆಪಿ ಜೊತೆಗೆ ಸಖ್ಯ ಬೆಳೆಸಲು ಹಲವು ಶಾಸಕರು ಆಸಕ್ತಿ ತೋರಿದರು ಎಂಬಂತಹ ಸುದ್ದಿಗಳು ಹರಿದಾಡುತ್ತಿವೆ. 

Advertisement

Advertisement

ಈ ಮಧ್ಯೆ ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ, ಬಿಜೆಪಿ ಬಗ್ಗೆ ಮೃಧು ಧೋರಣೆವುಳ್ಳ ಹೇಳಿಕೆ ನೀಡಿದ್ದು, ವಿಷಯಾಧಾರಿತ ಬೆಂಬಲ ನೀಡುವುದಾಗಿ ಪ್ರಕಟಿಸಿದ್ದಾರೆ.
ಈ ಎಲ್ಲಾ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಬಿಜೆಪಿ ಜೊತೆಗೆ ಸಂಬಂಧ ಬೆಸೆಯುವ ಸುದ್ದಿಗಳು ಆಧಾರ ರಹಿತವಾಗಿವೆ ಎಂದು ಪ್ರತಿಕ್ರಿಯಿಸಿದ್ದಾರೆ.
ಸತ್ಯಕ್ಕೆ ಧೂರವಾದ ಈ ರೀತಿಯ ಊಹಾಪೋಹಗಳಿಗೆ ಪಕ್ಷದ ಶಾಸಕರು ಹಾಗೂ ಕಾರ್ಯಕರ್ತರು ಕಿವಿಗೊಡಬೇಕಾಗಿಲ್ಲ. ಜನಸೇವೆಯ ಮೂಲಕ ಪಕ್ಷವನ್ನು ಕಟ್ಟೋಣ. ನಮ್ಮ ಜನಪರ ಹೋರಾಟ ನಿರಂತರ ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement