ಎಚ್.ಡಿ ಕುಮಾರಸ್ವಾಮಿ ಮತ್ತು ಯಡಿಯೂರಪ್ಪ
ಬೆಂಗಳೂರು: ಮೈತ್ರಿ ಸರ್ಕಾರದ ಪತನಕ್ಕೆ ಕಾರಣವಾಗಿದ್ದ ಬಿಜೆಪಿ ಜೊತೆ ಅಧಿಕಾರಕ್ಕಾಗಿ ಹೊಂದಾಣಿಕೆ ರಾಜಕಾರಣ ಮಾಡಲು ಜೆಡಿಎಸ್ ಶಾಸಕರು ಪಕ್ಷದ ವರಿಷ್ಠರಿಗೆ ಒತ್ತಡ ಹೇರಿದ್ದಾರೆ ಎಂದು ಹೇಳಲಾಗಿದೆ.
ನಗರದ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಸಂಜೆ ಪಕ್ಷದ ಶಾಸಕರ ಜೊತೆ ಭೋಜಕೂಟದ ನೆಪದಲ್ಲಿ ಸಭೆ ನಡೆಸಿದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಗೆ ಸಭೆಯಲ್ಲಿ ಬಿಜೆಪಿಗೆ ಬೆಂಬಲ ನೀಡುವ ಬಗ್ಗೆ ಹಲವಾರು ಶಾಸಕರು ಒತ್ತಾಯ ಮಾಡಿದ್ದಾರೆ ಎನ್ನಲಾಗಿದೆ.
ಅಧಿಕಾರ ಕಳೆದುಕೊಂಡಿರುವ ಹಿನ್ನಲೆಯಲ್ಲಿ ಜೆಡಿಎಸ್ ಪಕ್ಷದ ನಾಯಕರಿಗೆ ಹಾಗೂ ಶಾಸಕರಿಗೆ ಆಪರೇಷನ್ ಕಮಲ ಭೀತಿ ಆವರಿಸಿದೆ.ಈ ಹಿನ್ನಲೆಯಲ್ಲಿ ಎಚ್ ಡಿ ಕುಮಾರಸ್ವಾಮಿ ಮುಂದೆ ಪ್ರಸ್ತಾಪವೊಂದನ್ನು ಮಂಡಿಸಿರುವ ಕೆಲ ಶಾಸಕರು ನಮ್ಮ ಪಕ್ಷದ ಶಾಸಕರು ಆಪರೇಷನ್ ಕಮಲಕ್ಕೆ ಒಳಗಾಗುವುದನ್ನು ತಪ್ಪಿಸಲು ನಾವೇ ಅವರ ಜೊತೆ ಕೈ ಜೋಡಿಸುವ ಮೂಲಕ ಪಕ್ಷವನ್ನು, ಶಾಸಕರನ್ನು ಉಳಿಸಿಕೊಳ್ಳಬಹುದು ಎಂಬ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಇನ್ನೂ ಈ ಸಂಬಂಧ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಕುಮಾರಸ್ವಾಮಿ ಶಾಸಕರಿಗೆ ಭರವಸೆ ನೀಡಿದ್ದಾರೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics