ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿದ್ದೇನೆ: ದೇವೇಗೌಡ ಕಣ್ಣೀರು 
ರಾಜಕೀಯ

ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿದ್ದೇನೆ: ದೇವೇಗೌಡ ಕಣ್ಣೀರು

ಜೆಡಿಎಸ್ ನ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿದ್ದೇನೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಕಣ್ಣೀರಿಟ್ಟಿದ್ದಾರೆ.

ಜೆಡಿಎಸ್ ನ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿದ್ದೇನೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಕಣ್ಣೀರಿಟ್ಟಿದ್ದಾರೆ. 
ಜೆಪಿ ಭವನದಲ್ಲಿ ಮಾತನಾಡಿದ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ, ಮೈತ್ರಿ ಸರ್ಕಾರದಲ್ಲಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಸ್ಥಾನಮಾನ ನೀಡಲು ಸಾಧ್ಯವಾಗಲಿಲ್ಲ. ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿದ್ದೇನೆ, ಅವರಲ್ಲಿ ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದಾರೆ.
ಪಕ್ಷದ ಕಾರ್ಯಕರ್ತರು ಕಷ್ಟದಲ್ಲಿ ಭಾಗಿಯಾಗಿದ್ದಾರೆ. ಆ.7ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಜೆಡಿಎಸ್ ಕಾರ್ಯಕ್ರಮದಲ್ಲಿ ಕಾರ್ಯಕರ್ತರು ಭಾಗಿಯಾಗಬೇಕು ಎಂದು ಕರೆ ನೀಡಿದ್ದಾರೆ. 
ಕಾಂಗ್ರೆಸ್ ವಿರುದ್ಧ ಕುಪೇಂದ್ರ ರೆಡ್ಡಿ ಅಸಮಾಧಾನ 
ಇನ್ನು ಮೈತ್ರಿ ಸರ್ಕಾರ ಪತನಗೊಂಡಿರುವುದಕ್ಕೆ ಜೆಡಿಎಸ್ ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ ಕಾಂಗ್ರೆಸ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಕಾಂಗ್ರೆಸ್ ನಾಯಕರು ಸರಿಯಾಗಿ ಇದ್ದಿದ್ದರೆ ಸರ್ಕಾರ ಬೀಳುತ್ತಿರಲಿಲ್ಲ ಎಂದು ಹೆಚ್ ಡಿ ದೇವೇಗೌಡರ ಬಳಿ ಹೇಳಿದ್ದಾರೆ. 
ಎಸ್ ಟಿ ಸೋಮಶೇಖರ್ ಸ್ವಾರ್ಥ, ಅಧಿಕಾರಕ್ಕಷ್ಟೇ ಸೀಮಿತರಾದರು, ಮೈತ್ರಿಯಿಂದ ಸಾಕಷ್ಟು ಸಮಸ್ಯೆ ಉಂಟಾಗಿತ್ತು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯೇ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ