ಸಿದ್ದರಾಮಯ್ಯ 
ರಾಜಕೀಯ

14 ಶಾಸಕರನ್ನು ಅನರ್ಹಗೊಳಿಸಿ ಹೊರಡಿಸಿರುವ ಆದೇಶ ಪ್ರಜಾಪ್ರಭುತ್ವಕ್ಕೆ ಸಂದ ನೈಜ ಗೆಲುವು; ಸಿದ್ದರಾಮಯ್ಯ

ವಿಧಾನಸಭಾಧ್ಯಕ್ಷ ಕೆ.ಆರ್​. ರಮೇಶ್​ಕುಮಾರ್​ ಅವರು 14 ಮಂದಿ ಅತೃಪ್ತ ಶಾಸಕರನ್ನು ಅನರ್ಹಗೊಳಿಸಿ ...

ಬೆಂಗಳೂರು: ವಿಧಾನಸಭಾಧ್ಯಕ್ಷ ಕೆ.ಆರ್​. ರಮೇಶ್​ಕುಮಾರ್​ ಅವರು 14 ಮಂದಿ ಅತೃಪ್ತ ಶಾಸಕರನ್ನು ಅನರ್ಹಗೊಳಿಸಿ ನೀಡಿರುವ ತೀರ್ಮಾನ ಅವಕಾಶವಾದಿ ರಾಜಕಾರಣಕ್ಕೆ ನೀಡಿರುವ ಕೊಡಲಿ ಏಟು. ಪ್ರಜಾಪ್ರಭುತ್ವಕ್ಕೆ ಸಂದ ನೈಜ ಗೆಲುವು ಎಂದು ಮಾಜಿ ಸಿಎಂ ಹಾಗೂ ಕಾಂಗ್ರೆಸ್​ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 
ಈ ಕುರಿತು ಟ್ವೀಟ್ ಮಾಡಿರುವ ಅವರು, ಅತೃಪ್ತ ಶಾಸಕರನ್ನು ಪಕ್ಷ ವಿರೋಧಿ ಚಟುವಟಿಕೆಯಡಿ ಅನರ್ಹಗೊಳಿಸಿದ್ದಾರೆ. ಸ್ವಾರ್ಥ ಸಾಧನೆ, ಅಧಿಕಾರದಾಸೆಯಿಂದ ಜನಾದೇಶವನ್ನು ಧಿಕ್ಕರಿಸಿ ತಮ್ಮನ್ನು ತಾವು ಮಾಡಿಕೊಳ್ಳುವ ಹೀನ ಸಂಸ್ಕೃತಿಗೆ ಈ ತೀರ್ಪು ಇತಿಶ್ರೀ ಹಾಡಲಿದೆ ಎಂಬುದು ನನ್ನ ನಂಬಿಕೆ ಎಂದರು. 
ಸರ್ಕಾರಗಳು ಬರುತ್ತವೆ, ಹೋಗುತ್ತವೆ. ಪದವಿ, ಅಧಿಕಾರ ರಾಜಕಾರಣದಲ್ಲಿ ಎಂದಿಗೂ ಶಾಶ್ವತವಲ್ಲ. ಮುಂದಿನ ಪೀಳಿಗೆಯ ರಾಜಕಾರಣಕ್ಕೆ ನಾವು ಮಾದರಿಯಾಗಿ ಏನನ್ನು ಬಿಟ್ಟುಹೋಗುತ್ತೇವೆ ಎಂಬುದು ಮುಖ್ಯ ಸಭಾಧ್ಯಕ್ಷರ ಇಂದಿನ ತೀರ್ಪು ಮುಂದಿನ ಪೀಳಿಗೆಯ ರಾಜಕಾರಣಕ್ಕೆ ಶಿಸ್ತಿನ ಮಾದರಿಯನ್ನು ತಿಳಿಸಿಕೊಡುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಯೆಟ್ನಾಂ ದೋಣಿ ದುರಂತ: 15 ಭಾರತೀಯ ಪ್ರವಾಸಿಗರು ಸಾವು; ತಮಿಳುನಾಡು, ಆಂಧ್ರ ಮಂದಿ ಸಮುದ್ರಪಾಲು; Video

INS Mahendragiri: ಪ್ರಾಜೆಕ್ಟ್ 17A; ಕೇವಲ 18 ತಿಂಗಳಲ್ಲಿ 6ನೇ ಯುದ್ಧನೌಕೆ ನೌಕಾಪಡೆಗೆ ಸೇರ್ಪಡೆ; Video

'ಕರಾವಳಿ' ವಿವಾದ: ಸುದೀರ್ಘ ಪೋಸ್ಟ್ ಹಾಕಿ, ವಾಟ್ಸಾಪ್ ಚಾಟಿಂಗ್ ಸ್ಕ್ರೀನ್ ಶಾಟ್ ಹಂಚಿಕೊಂಡ ಪ್ರಜ್ವಲ್ ದೇವರಾಜ್!

ಸರ್ಕಾರ ಉರುಳಿಸಲು BJP ಕುದುರೆ ವ್ಯಾಪಾರ; ಒಬ್ಬ ಶಾಸಕನಿಗೆ ಬರೋಬ್ಬರಿ 20-30 ಕೋಟಿ ರೂ ಆಫರ್: ಸಿಎಂ ಒಮರ್ ಅಬ್ದುಲ್ಲಾ ಆರೋಪ

EDಯಿಂದ ಅನಿಲ್ ಅಂಬಾನಿಗೆ ಸೇರಿದ 1,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಹೆಚ್ಚುವರಿ ಆಸ್ತಿಗಳ ಮುಟ್ಟುಗೋಲು!