ರಾಜಕೀಯ

ಭವಿಷ್ಯದಲ್ಲಿ ಕಾಂಗ್ರೆಸ್ ಜತೆ ಮೈತ್ರಿ ಇಲ್ಲ: ಹೆಚ್.ಡಿ.ದೇವೇಗೌಡ

Lingaraj Badiger
ಬೆಂಗಳೂರು: ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆ ಸೇರಿದಂತೆ ಭವಿಷ್ಯದ ಎಲ್ಲಾ ಚುನಾವಣೆಗಳಲ್ಲೂ ಕಾಂಗ್ರೆಸ್ ಸೇರಿದಂತೆ ಇತರೆ ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಬುಧವಾರ ಸ್ಪಷ್ಟಪಡಿಸಿದ್ದಾರೆ.
ಇಂದು ಜೆಡಿಎಸ್ ಪ್ರಧಾನ ಕಚೇರಿ ಜೆ.ಪಿ.ಭವನದಲ್ಲಿ ಲೋಕಸಭೆ, ವಿಧಾನಸಭೆ ಚುನಾವಣೆಗಳಲ್ಲಿ ಪರಾಜಿತಗೊಂಡ ಅಭ್ಯರ್ಥಿಗಳ ಸಭೆ ನಡೆಯಿತು. ಸಭೆಯಲ್ಲಿ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಇದ್ದ ಪಕ್ಷದ ಸ್ಥಿತಿಗೂ ಸಾರ್ವತ್ರಿಕ ಚುನಾವಣೆ ಬಳಿಕದ ಸ್ಥಿತಿಗೂ ಹಾಗೂ ಕಾಂಗ್ರೆಸ್ ಜೊತೆಗಿನ ಮೈತ್ರಿಯಿಂದಾದ ಲಾಭ, ನಷ್ಟ ಹಾಗೂ ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲಿಗೆ ಕಾರಣಗಳ ಕುರಿತು ಪಕ್ಷದ ಮುಖಂಡರ ಜೊತೆ ದೇವೇಗೌಡರು ಸಮಾಲೋಚನೆ ನಡೆಸಿದರು.
ಮೇಲ್ಮಟ್ಟದ ನಾಯಕರು ಒಂದಾದರೂ ಸ್ಥಳೀಯ ಮಟ್ಟದಲ್ಲಿ ಹೊಂದಾಣಿಕೆ ಕಷ್ಟ. ಪಕ್ಷದ ಬಲವರ್ಧನೆಗೆ ಸ್ವತಂತ್ರವಾಗಿ ಚುನಾವಣೆ ಎದುರಿಸುವುದೇ ಸೂಕ್ತ ಎಂಬ ಅಭಿಪ್ರಾಯಕ್ಕೆ ಬರಲಾಯಿತು.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡ ಅವರು, ಪರಾಜಿತ ಅಭ್ಯರ್ಥಿಗಳ ಸಭೆ ನಡೆಸಲಾಗಿದ್ದು, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಯಾವುದೇ ಪಕ್ಷದ ಜೊತೆ ಹೊಂದಾಣಿಕೆ ಮಾಡಿಕೊಳ್ಳದಂತೆ ಅಭಿಪ್ರಾಯ ವ್ಯಕ್ತವಾಗಿದ್ದು, ಮೈತ್ರಿ ಮಾಡಿಕೊಳ್ಳದಂತೆ ತಿರ್ಮಾನ ಕೈಗೊಳ್ಳಲಾಗಿದೆ ಎಂದರು.
SCROLL FOR NEXT