ದುರಹಂಕಾರದಿಂದಲೇ ಸೋಲಾಯಿತು: ಸಿಡಿದೆದ್ದ ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರು ಸ್ವಂತ ಪಕ್ಷದ ಮೇಲೆಯೇ ಮುಗಿಬಿದ್ದಿದ್ದು, ಜೆಡಿಎಸ್ ಪಕ್ಷದ ದುರಹಂಕಾರದಿಂದಲೇ ಅದಕ್ಕೆ ಸೋಲಾಗಿದೆ ಎಂದು ಹೇಳಿದ್ದಾರೆ..
ಮೈಸೂರು: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರು ಸ್ವಂತ ಪಕ್ಷದ ಮೇಲೆಯೇ ಮುಗಿಬಿದ್ದಿದ್ದು, ಜೆಡಿಎಸ್ ಪಕ್ಷದ ದುರಹಂಕಾರದಿಂದಲೇ ಅದಕ್ಕೆ ಸೋಲಾಗಿದೆ ಎಂದು ಹೇಳಿದ್ದಾರೆ.
ಕೆ.ಆರ್ ನಗರದಲ್ಲಿ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ ಪಕ್ಷದ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ತಾವು ಶಿಫಾರಸ್ಸು ಮಾಡಿ ಒಬ್ಬರಿಗೂ ಕೂಡ ಟಿಕೆಟ್ ನೀಡಿಲ್ಲ ಒಬ್ಬೇ ಒಬ್ಬ ಕುರುಬ ಅಭ್ಯರ್ಥಿಗೆ ಟಿಕೆಟ್ ನೀಡಲಿಲ್ಲ ಎಂದು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
ಜೆಡಿಎಸ್ ವಿರುದ್ಧವೇ ಸಿಡಿದೆದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್. ಕೆ.ಆರ್.ನಗರ ಪುರಸಭೆ ಸೋಲಿನ ಹಿನ್ನೆಲೆ ನಡೆದ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ಹೊರ ಹಾಕಿದ್ದಾರೆ. ಕೆ.ಆರ್.ನಗರ ಪುರಸಭಾ ಚುನಾವಣೆಯಲ್ಲಿ ಜೆಡಿಎಸ್ನಿಂದ ನಮ್ಮ ಕುರುಬ ಸಮುದಾಯಕ್ಕೆ ಒಂದೇ ಒಂದು ಟಿಕೆಟ್ ಕೂಡ ನೀಡಿಲ್ಲ. ನಮ್ಮ ಸಮುದಾಯವನ್ನು ಕಡೆಗಣಿಸಿದ್ದಾರೆ ಎಂದರು.
ನಮ್ಮದೇ ದುರಹಂಕಾರದಿಂದ ಸೋಲಾಗಿದೆ ಎಂದಿರುವ ವಿಶ್ವನಾಥ್, ಜೆಡಿಎಸ್ನಲ್ಲಿ ಹಣವೇ ಮುಖ್ಯ, ಕಾರ್ಯಕರ್ತರಿಗೂ ಅಷ್ಟೆ, ನಾಯಕರಿಗೂ ಅಷ್ಟೆ ಎಂದು ಎಲ್ಲರ ಮೇಲೂ ವಾಗ್ದಾಳಿ ನಡೆಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.