ರಾಜಕೀಯ

ಮೂಡದ ಒಮ್ಮತ: ದೆಹಲಿಯಲ್ಲಿ ವೇಣುಗೋಪಾಲ್- ಕುಮಾರಸ್ವಾಮಿ ಭೇಟಿ, ಚರ್ಚೆ

Shilpa D
ಬೆಂಗಳೂರು: ಲೋಕಸಭಾ ಚುನಾವಣೆಯ ಸೋಲಿನಿಂದ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಮೈತ್ರಿ ಸರಕಾರವನ್ನು ಉಳಿಸಿಕೊಳ್ಳಲು ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮಾಡುವ ಕಸರತ್ತು ಈಗ ಕಾಂಗ್ರೆಸ್‌ ಹೈಕಮಾಂಡ್‌ ಅಂಗಳ ತಲುಪಿದೆ.
ಈ ಸಂಬಂಧ ನಿನ್ನೆ ನವದೆಹಲಿಯಲ್ಲಿ ಕುಮಾರಸ್ವಾಮಿ ಮತ್ತು ವೇಣುಗೋಪಾಲ್ ಚರ್ಚಿಸಿದ್ದಾರೆ. ಬೆಂಗಳೂರಿಗೆ ಆಗಮಿಸಿದ ನಂತರ ಸಿಎಂ ಕುಮಾರಸ್ವಾಮಿ  ಸಂಪುಟ ವಿಸ್ತರಣೆಯೋ ಅಥವಾ ಫುನಾರಚನೆಯೋ ಎಂಬ ಬಗ್ಗೆ ಜೂನ್ ಮೊದಲ ವಾರದಲ್ಲಿ ಪ್ರಕಟಿಸಲಿದ್ದಾರೆ.
ನವದೆಹಲಿಯಲ್ಲಿ ಕೆಸಿ ವೇಣುಗೋಪಾಲ್ ಅವರನ್ನು ರಾಜ್ಯ ಕಾಂಗ್ರೆಸ್ ನ ಹಲವು ಮುಖಂಡರು ಭೇಟಿಯಾಗಿದ್ದಾರೆ.  ಬೆಂಗಳೂರಿನಲ್ಲಿ ಸತತ ಎರಡು ದಿನ ನಿರಂತರ ಸಭೆಗಳನ್ನು ನಡೆಸಿ ಶಾಸಕರು, ಸಚಿವರು ಮತ್ತು ಹಿರಿಯ ಮುಖಂಡರ ಅಭಿಪ್ರಾಯ ಸಂಗ್ರಹಿಸಿದ್ದ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಎಲ್ಲರ ಅಭಿಪ್ರಾಯವನ್ನು ಹೈಕಮಾಂಡ್‌ ಗಮನಕ್ಕೆ ತಂದು ಅವರ ಸೂಚನೆಯ ಮೇರೆಗೆ ಮುಂದುವರಿಯಲು ನಿರ್ಧರಿಸಿದ್ದಾರೆ.
ಕೆ.ಸಿ. ವೇಣುಗೋಪಾಲ್ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ರಾಜ್ಯದ ಮೈತ್ರಿ ಸರ್ಕಾರದ ಬಗ್ಗೆ ಪಕ್ಷದ ಶಾಸಕರು ಮತ್ತು ಹಿರಿಯ ನಾಯಕರಲ್ಲಿ ಇರುವ ಅಭಿಪ್ರಾಯವನ್ನು ವಿವರಿಸಿ, ಸದ್ಯದ ಪರಿಸ್ಥಿತಿಯಲ್ಲಿ ಸಂಪುಟ ಪುನಾರಚನೆಗಿಂತ ಸಂಪುಟ ವಿಸ್ತರಣೆಗೆ ಹೆಚ್ಚಿನ ಒಲವು ವ್ಯಕ್ತವಾಗಿರುವ ಬಗ್ಗೆ ವಿವರಿಸುವ ಸಾಧ್ಯತೆ ಇದೆ.
SCROLL FOR NEXT