ಸಂಗ್ರಹ ಚಿತ್ರ 
ರಾಜಕೀಯ

ಸಿಎಂ ಭೇಟಿಯಾದ ಬಿಜಪಿ ಶಾಸಕ: ಹಲವು ಊಹಾಪೋಹ

ಲೋಕಸಭೆ ಚುನಾವಣೆ ಸೋಲಿನ ಬಳಿಕ ಕಾಂಗ್ರೆಸ್-ಜೆಡಿಎಸ್ ಮೈತ್ರ್ ಪಕ್ಷಗಳಿಗೆ ದಿಕ್ಕು ಕಾಣದಂತಾಗಿದೆ, ಇದರ ನಡುವೆ ಬಿಜೆಪಿ ಆಪರೇಷನ್ ಕಮಲ ನಡೆಸಿ ಇನ್ನಷ್ತು ಶಾಸಕರು, ನಾಯಕರನ್ನು ತನ್ನತ್ತ ಸೆಳೆದುಕೊಳ್ಳುವ ಹವಣಿಕೆಯಲ್ಲಿದೆ.

ಬೆಂಗಳೂರು: ಲೋಕಸಭೆ ಚುನಾವಣೆ ಸೋಲಿನ ಬಳಿಕ ಕಾಂಗ್ರೆಸ್-ಜೆಡಿಎಸ್ ಮೈತ್ರ್ ಪಕ್ಷಗಳಿಗೆ ದಿಕ್ಕು ಕಾಣದಂತಾಗಿದೆ, ಇದರ ನಡುವೆ ಬಿಜೆಪಿ ಆಪರೇಷನ್ ಕಮಲ ನಡೆಸಿ ಇನ್ನಷ್ತು ಶಾಸಕರು, ನಾಯಕರನ್ನು ತನ್ನತ್ತ ಸೆಳೆದುಕೊಳ್ಳುವ ಹವಣಿಕೆಯಲ್ಲಿದೆ. ಆದರೆ ಈ ಎಲ್ಲದರ ನಡುವೆ ಭಾನುವಾರ ಬಿಜೆಪಿ ಶಾಸಕರೊಬ್ಬರು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರನ್ನು ಭೇಟಿಯಾಗಿರುವುದು ಚರ್ಚೆಗೆ ಗ್ರಾಸವಾಗಿದೆ. 
ಕನಕಗಿರಿ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ್ ಧಾದೇಶಪುರ್ ಭಾನುವಾರ ಸಿಎಂ ಕುಮಾರಸ್ವಾಮಿಯವರನ್ನು ಭೇಟಿಯಾಗಿದ್ದಾರೆ. ಬಸವರಾಜ್ ಹಾಗೂ ಸಿಎಂ ಕುಮಾರಸ್ವಾಮಿ ಅವರ ಭೇಟಿಯ ಚಿತ್ರಗಳು ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ. ಶಾಸಕ ಬಸವರಾಜ್ ಬಿಜೆಪಿ ತೊರೆಯಲಿದ್ದಾರೆ ಎಂಬ ಮಾತುಗಳು ಕೇಳುತ್ತಿದೆ. ಆದ್ರೆ ಕೇಸರಿ ಪಕ್ಷ ಇದೆಲ್ಲವನ್ನೂ ಅಲ್ಲಗೆಳೆದಿದೆ.
ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಮೀರ್ ಅಹ್ಮದ್ ಒಂದು ಡಜನ್ ನಷ್ಟು ಸಂಖ್ಯೆಯ ಬಿಜೆಪಿ ಶಾಸಕರು ಕಾಂಗ್ರೆಸ್-ಜೆಡಿಎಸ್ ಪಕ್ಷಗಳಿಗೆ ಸೇರಲು ನಿರ್ಧರಿಸಿದ್ದಾರೆ ಎಂದು ಹೇಳಿಕೆ ನೀಡಿರುವ ಬೆನ್ನಲ್ಲೇ ಈ ಭಾವಚಿತ್ರ ವೈರಲ್ ಆಗಿದೆ.. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ "ಈ ಭೇಟಿಯ ಬಗ್ಗೆ ನನಗೆ ಗೊತ್ತಿಲ್ಲ" ಎಂದು ಹೇಳಿದ್ದಾರೆ.
ಇನ್ನು ಸಿಎಂ ಕಛೇರಿಯು ಬಸವರಾಜ್ ಭೇಟಿಯನ್ನು "ಕೇವಲ ಸೌಜನ್ಯದ ಭೇಟಿ" ಎಂದಷ್ಟೇ ಹೇಳಿದೆ.ಬಿಜೆಪಿ ವಕ್ತಾರ ಮಾತನಾಡಿ  "ಓರ್ವ ಶಾಸಕರಾಗಿ ರಾಜ್ಯದ ಮುಖ್ಯಮಂತ್ರಿಯನ್ನು ಬಸವರಾಜ್ ಭೇಟಿಯಾಗಿದ್ದಾರೆ, ಇದಕ್ಕೆ ಪ್ರತ್ಯೇಕ ಅರ್ಥ ಕಲ್ಪಿಸುವ ಅಗತ್ಯವಿಲ್ಲ" ಎಂದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test: ವಿಂಡೀಸ್ ವಿರುದ್ಧ ಕುಲದೀಪ್ ಯಾದವ್ ಭರ್ಜರಿ ಬೌಲಿಂಗ್, ವಿಶ್ವ ದಾಖಲೆ

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

SCROLL FOR NEXT