ರಾಜಕೀಯ

ರಾಹುಲ್ ಗಾಂಧಿ ರಾಜಿನಾಮೆ ನೀಡುವುದಾದರೆ ನೀಡಲಿ, ಆದರೆ...: ವೀರಪ್ಪ ಮೊಯ್ಲಿ

Srinivasamurthy VN
ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜಿನಾಮೆ ನೀಡುವುದಾದರೆ ನೀಡಲಿ ಎಂದು ಪಕ್ಷದ ಹಿರಿಯ ನಾಯಕ ವೀರಪ್ಪ ಮೊಯ್ಲಿ ಹೇಳಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹೀನಾಯ ಪ್ರದರ್ಶನದ ಬಳಿಕ ರಾಹುಲ್ ಗಾಂಧಿ ರಾಜಿನಾಮೆ ನೀಡಲು ಮುಂದಾಗಿದ್ದು, ಈ ವಿಚಾರ ದೇಶದ ರಾಜಕೀಯ ವಲಯದಲ್ಲಿ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ವೀರಪ್ಪ ಮೊಯ್ಲಿ ಅವರು, 'ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿ.. ಆದರೆ ಅದಕ್ಕೂ ಮೊದಲು ಆ ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡಲಿ ಎಂದು ಹೇಳಿದ್ದಾರೆ.
'ರಾಹುಲ್ ಗಾಂಧಿ ಅವರ ಸ್ಥಾನವನ್ನು ಯಾರಿಂದಲೂ ತುಂಬಲು ಸಾಧ್ಯವಿಲ್ಲ, ಅವರಿಗೆ ಅವರೇ ಸಾಟಿ, ಅವರಿಗೆ ಉತ್ತಮ ನಾಯಕತ್ವ ಗುಣ ಇದ್ದು, ಒಂದೊಮ್ಮೆ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾದರೆ ಆ ಜಾಗಕ್ಕೆ ಸೂಕ್ತ ವ್ಯಕ್ತಿಯನ್ನು ಮೊದಲು ನೇಮಿಸಬೇಕು. ಆ ಬಳಿಕವಷ್ಟೇ ರಾಜಿನಾಮೆ ನೀಡಲಿ ಎಂದು ಹೇಳಿದರು. 
ರಾಹುಲ್ ಗಾಂಧಿ ರಾಜಿನಾಮೆಯನ್ನು ಅಂಗೀಕರಿಸಿಲ್ಲ. ಹೀಗಾಗಿ ಇನ್ನೂ ಅವರೇ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರಾಗಿದ್ದಾರೆ. ಪಕ್ಷದ ಹಿರಿಯರು ಅವರು ರಾಜೀನಾಮೆ ನೀಡಬಾರದು ಎಂದು ಒತ್ತಾಯಿಸಿದ್ದಾರೆ. ಆದರೆ ಏನೇ ನಿರ್ಧಾರ ತೆಗೆದುಕೊಂಡರೂ ಅವರು ಚೆನ್ನಾಗಿ ಆಲೋಚಿಸಿರುತ್ತಾರೆ, ಅವರ ಸ್ಥಾನವನ್ನು ತುಂಬಲೂ ಯಾರಿಂದಲೂ ಸಾಧ್ಯವಿಲ್ಲ ಎನ್ನುವುದು ನನ್ನ ನಂಬಿಕೆ ಎಂದು ಮೊಯ್ಲಿ ಹೇಳಿದರು.
SCROLL FOR NEXT