ದಿನೇಶ್ ಗುಂಡೂರಾವ್ 
ರಾಜಕೀಯ

ಮತ್ತೆ ಸಂಪುಟ ಪುನ​ರ​ಚ​ನೆಯಾಗಲಿದೆ: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್

ಇಬ್ಬರು ಪಕ್ಷೇತರ ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಂಡ ಬೆನ್ನಲ್ಲೇ ...

ಬೆಂಗಳೂರು: ಇಬ್ಬರು ಪಕ್ಷೇತರ ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಂಡ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಅಸಮಾಧಾನ ಭುಗಿಲೆದಿದ್ದು, ಖಂಡಿತ ಮತ್ತೆ ಸಂಪುಟ ಪುನ​ರ​ಚ​ನೆಯಾಗಲಿದೆ ಮತ್ತು ಹಲವು ಹಿರಿಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಶನಿವಾರ ಹೇಳಿದ್ದಾರೆ.
ನಿನ್ನೆಯಷ್ಟೇ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಪಕ್ಷೇತರ ಶಾಸಕರಾದ ಆರ್ ಶಂಕರ್ ಮತ್ತು ಎಚ್ ನಾಗೇಶ್ ಅವರನ್ನು ತಮ್ಮ ಸಂಪುಟಕ್ಕೆ ಸೇರಿಸಿಕೊಂಡಿದ್ದರು. ಇದರ ಬೆನ್ನಲ್ಲೇ ಸಚಿವ ಆಕಾಂಕ್ಷಿಗಳಾಗಿದ್ದ ಹಲವು ಹಿರಿಯ ಕಾಂಗ್ರೆಸ್ ನಾಯಕರು ಪ್ರಮಾಣವಚನ ಸ್ವೀಕಾರಕ್ಕೆ ಗೈರಾಗುವ ಮೂಲಕ ಅಸಮಾಧಾನ ಹೊರ ಹಾಕಿದ್ದರು.
ಈ ಕುರಿತು ಇಂದು ವರದಿಗಾರರಿಗೆ ಪ್ರತಿಕ್ರಿಯಿಸಿದ ದಿನೇಶ್ ಗುಂಡೂರಾವ್ ಅವರು, ಇನ್ನು ಆರು ತಿಂಗಳಲ್ಲೇ ಸಂಪುಟ ಪುನ​ರ​ಚ​ನೆಯಾಗಲಿದೆ. ಈ ವೇಳೆ ಹಲವು ಹಿರಿಯ ನಾಯಕರು ಸೇರಿದಂತೆ ಅವಕಾಶ ವಂಚಿತ ಶಾಸಕರಿಗೆ ಅವಕಾಶ ನೀಡಲಾಗುವುದು ಎಂದರು.
ಸಚಿವರ ಮೌಲ್ಯಮಾಪನ ನಡೆಸಿದ ಬಳಿಕ ಸಂಪುಟದಿಂದ ಯಾರನ್ನು ಕೈಬಿಡಬೇಕು ಎಂಬುದನ್ನು ನಿರ್ಧರಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ