ಬಿಎಂಟಿಸಿ ಬಸ್ ನಿಲ್ದಾಣ ಉದ್ಘಾಟೆನೆಗೆ ಬಚ್ಚೇಗೌಡಗೆ ಆಹ್ವಾನವಿಲ್ಲ
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಬಿಎಂಟಿಸಿ ಬಸ್ ನಿಲ್ದಾಣದ ಉದ್ಘಾಟನಾ ಕಾರ್ಯಕ್ರಮಕ್ಕೆ ಸಂಸದ ಬಿ.ಎನ್.ಬಚ್ಚೇಗೌಡ ಅವರನ್ನು ಆಹ್ವಾನಿಸದೆ ಅವಮಾನಿಸಲಾಗಿದೆ ಎಂದು ಬಿಜೆಪಿ ಕಾರ್ಯಕರ್ತರು ಕಾರ್ಯಕ್ರಮ ತಡೆದು ಪ್ರತಿಭಟನೆ ನಡೆಸಿದರು.
ಸಚಿವ ಎಂಟಿಬಿ ನಾಗರಾಜ್ ಸಣ್ಣತನದ ರಾಜಕೀಯ ಮಾಡುತ್ತಿದ್ದಾರೆ. ಆಹ್ವಾನ ಪತ್ರಿಕೆಯಲ್ಲಿ ಕಾಟಾಚಾರಕ್ಕೆ ಹೆಸರು ಮುದ್ರಿಸಿ ಸಂಸದರಿಗೆ ಆಹ್ವಾನ ನೀಡದೆ ಅವಮಾನಿಸಿದ್ದಾರೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಯತ್ನಿಸಿದರೂ, ಬ್ಯಾರಿಕೇಡ್‍ಗಳನ್ನು ತಳ್ಳಿಕೊಂಡು ಕಾರ್ಯಕ್ರಮ ಪ್ರವೇಶಿಸಿ ಆಕ್ರೋಶ ಹೊರಹಾಕಿದರು.
ಸಮಾರಂಭದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಉಂಟಾಯಿತು.