ರಾಜಕೀಯ

ಮುಖ್ಯಮಂತ್ರಿ ಕಚೇರಿಗೆ ಮುತ್ತಿಗೆ ಹಾಕುವ ಅಗತ್ಯವಿಲ್ಲ. ನಾನೇ ಬಹಿರಂಗ ಚರ್ಚೆಗೆ ಸಿದ್ದ ಎಂದು ಬಿಜೆಪಿ ನಾಯಕರಿಗೆ ಆಹ್ವಾನ ನೀಡಿದ ಸಿಎಂ

Sumana Upadhyaya
ಬೆಂಗಳೂರು: ಜಿಂದಾಲ್ ಸ್ಟೀಲ್ ಕಂಪನಿಗೆ 3,667 ಎಕರೆ ಜಮೀನು ಮಾರಾಟ ಖಂಡಿಸಿ ಬಿಜೆಪಿ ನಡೆಸುತ್ತಿರುವ ಹೋರಾಟಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಬೆಳಗ್ಗೆ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾಗೆ ಮುತ್ತಿಗೆ ಹಾಕುವ ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬಹಿರಂಗ ಸವಾಲು ಹಾಕಿದ್ದಾರೆ. ಮುಖ್ಯಮಂತ್ರಿ ಕಚೇರಿಗೆ ಮುತ್ತಿಗೆ ಹಾಕುವ ಅಗತ್ಯತೆಯಿಲ್ಲ. ನಾನೇ ಬಹಿರಂಗ ಚರ್ಚೆಗೆ ಸಿದ್ದನಿದ್ದು ಜಿಂದಾಲ್ ಭೂಮಿ ಹಂಚಿಕೆ,ರೈತರ ಸಾಲಮನ್ನ.ಬರದ ಬಗ್ಗೆ ಚರ್ಚೆಗೆ ಸಿದ್ದನಿದ್ದೇನೆ.ತಾವೇ ಸ್ಥಳ ಹಾಗೂ ಸಮಯವನ್ನು ನಿಗದಿ ಮಾಡಿ ಎಂದು ಬಿಜೆಪಿ ನಾಯಕರಿಗೆ ಟ್ವೀಟರ್ ಮೂಲಕ ಸವಾಲು ಹಾಕಿದ್ದಾರೆ.
ಕಳೆದೆರಡು ದಿನಗಳಿಂದ ಆನಂದ್ ರಾವ್ ವೃತ್ತದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ ನಾಯಕರಿಗೆ ಮುಖ್ಯಮಂತ್ರಿ ಈ ಆಹ್ವಾನ ನೀಡಿದ್ದಾರೆ. ಪ್ರಧಾನಿ ಸೇರಿದಂತೆ ಕೇಂದ್ರ ಸಚಿವರೊಂದಿಗೆ ಹಲವಾರು ಸಮಸ್ಯೆಗಳ ಕುರಿತು ಚರ್ಚೆ ನಡೆಸಿದ್ದೇನೆ.ತಮ್ಮ ಪ್ರಶ್ನೆಗಳಿಗೂ ಉತ್ತರ ನೀಡಲು ಸಿದ್ದನಿದ್ದು ತಾವೇ ಸೂಕ್ತ ಸ್ಥಳ ಸಮಯ ನಿಗದಿ ಮಾಡೆ ಎಂದು ಸವಾಲು ಹಾಕಿದ್ದಾರೆ.
SCROLL FOR NEXT