ಶೋಭಾ ಕರಂದ್ಲಾಜೆ 
ರಾಜಕೀಯ

ಅಡಿಕೆ ಬೆಳೆಗಾರರ ಸಮಸ್ಯೆ ಸೇರಿದಂತೆ ಬಿಜೆಪಿ ಫೈರ್ ಬ್ರ್ಯಾಂಡ್ ಶೋಭಾ ಮುಂದಿದೆ ಹಲವು ಸವಾಲುಗಳು!

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ವೇಳಾಪಟ್ಟಿ ಹಾಕಿಕೊಂಡು ಕೆಲಸ ಮಾಡುತ್ತಾರೆ, ಸೋಮವಾರ ಉಡುಪಿಯಲ್ಲಿ, ಮಂಗಳವಾರ ..

ಉಡುಪಿ: ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ವೇಳಾಪಟ್ಟಿ ಹಾಕಿಕೊಂಡು ಕೆಲಸ ಮಾಡುತ್ತಾರೆ, ಸೋಮವಾರ ಉಡುಪಿಯಲ್ಲಿ, ಮಂಗಳವಾರ ಚಿಕ್ಕಮಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಉಳಿದಂತೆ ದೆಹಲಿಯಲ್ಲಿ ಸಂಸತ್ತಿನಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ಜನಿ ಎತ್ತುತ್ತಾರೆ. 
ಕಳೆದ ಬಾರಿ ಸಂಸದರಾಗಿದ್ದ ವೇಳೆ ಅವರನ್ನು ಭೇಟಿ ಮಾಡಲು ಸಿಗುವುದಿಲ್ಲ ಎಂಹ ಆರೋಪಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕೇಳಿ ಬಂದಿದ್ದವು. ಉಡುಪಿಗೆ ಶೋಭಾ ಹೊಸಬರಲ್ಲಸ 1998ರಲ್ಲಿ ಸೋಷಿಯೋ ಮೆಡಿಕಲ್ ವರ್ಕರ್ ಆಗಿ ಮಣಿಪಾಲದ ಕೆಎಂಸಿಗೆ ದಾಖಲಾಗಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನವರಾದ ಶೋಭಾ ಎಂಎಸ್ ಡಬ್ಯ್ಲೂ ನಲ್ಲಿ ಪದವಿ ಪಡೆದಿದ್ದಾರೆ, ಬಿಜೆಪಿಯ ಫೈರ್ ಬ್ರ್ಯಾಂಡ್ ಎಂಬ ಖ್ಯಾತಿ ಪಡೆದಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರದಲ್ಲಿ ಇಂಧನ ಸಚಿವೆಯಾಗಿದ್ದರು, 
2014 ರಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಶೋಭಾ ಉಡುಪಿಯಲ್ಲಿ ಕೇಂದ್ರೀಯ ವಿದ್ಯಾಲಯ, ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಜೆಮ್ಸ್ ಅಂಡ್ ಜ್ಯುವೆಲ್ಲರಿ,  ಗವರ್ನಮೆಂಟ್ ಟೂಲ್ ಅಂಡ್ ಟ್ರೈನಿಂಗ್ ಸೆಂಟರ್, ಹಾಗೂ ಬ್ರಹ್ಮಾವರದಲ್ಲಿ ಪಾಸ್ ಪೋರ್ಟ್ ಸೆಂಟರ್ ತರುವ ಭರವಸೆ ಹೊಂದಿದ್ದಾರೆ.
ಶೋಭಾ ಮುಂದೆ ಹಲವು ಸವಾಲುಗಳಿಗೆ, ಉಡುಪಿಯಲ್ಲಿ ಕೇಂದ್ರೀಯ ವಿದ್ಯಾಲಯಕ್ಕಾಗಿ ಶಾಶ್ವತ ಮೂಲಭೂತ ಸೌಕರ್ಯ ಒದಗಿಸಬೇಕಿದೆ, ಎರಡನೇಯದಾಗಿ ಚಿಕ್ಕಮಗಳೂರಿನ ಅಡಿಕೆ ಬೆಳೆಗಾರರ ಸಮಸ್ಯೆ ಬಗೆಹರಿಸಬೇಕಾಗಿದೆ,  ಗೋರಖ್ ಸಿಂಗ್ ಸಮಿತಿ ವರದಿಯನ್ನು ಸರ್ಕಾರ ಇನ್ನೂ ಅನುಷ್ಠಾನಗೊಳಿಸಿಲ್ಲ, 
ಪಶ್ಚಿಮ ಘಟ್ಟಗಳ ಕುರಿತ ಕಸ್ತೂರಿರಂಗನ್ ವರದಿಯನ್ನು ಅನುಷ್ಠಾನಗೊಳಿಸುವ ಬಗ್ಗೆ ಜನರಲ್ಲಿ ಭಯವೂ ಇದೆ ಅದಕ್ಕಾಗಿ ಜನರು ಈಗಾಗಲೇ ಪರಿಸರ ಮತ್ತು ಅರಣ್ಯ ಸಚಿವಾಲಯಕ್ಕೆ ತಮ್ಮ ಆತಂಕವನ್ನು ವ್ಯಕ್ತಪಡಿಸಿದ್ದಾರೆ. ಹೀಗಾಗಿ ಸಂಸತ್ತಿನಲ್ಲಿ ಶೋಭಾ ಈ ಎಲ್ಲಾ ವಿಷಯಗಳ ಬಗ್ಗೆ ದನಿ ಎತ್ತಿ ಚರ್ಚೆ ಮಾಡಬೇಕಿದೆ. 
ಯಡಿಯೂರಪ್ಪ ಮತ್ತು ಜಗದೀಶ್ ಶೆಟ್ಟರ್ ಸರ್ಕಾರದಲ್ಲಿ ಇಂಧನ ಸಚಿವೆಯಾಗಿ ಕೆಲಸ ಮಾಡಿದ್ದ ಶೋಭಾ ಆರಂಭದಿಂದಲೂ ಸಂಘ ಪರಿವಾರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT