ರಾಜಕೀಯ

ಮಲ್ಲಿಕಾರ್ಜುನ ಖರ್ಗೆಗೆ ಎಐಸಿಸಿ ಅಧ್ಯಕ್ಷ ಪಟ್ಟ?

Sumana Upadhyaya
ಬೆಂಗಳೂರು: ಎಐಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ರಾಹುಲ್ ಗಾಂಧಿ ಕಠಿಣ ನಿರ್ಧಾರ ತೆಗೆದುಕೊಂಡಿರುವುದರಿಂದ ವಿರೋಧ ಪಕ್ಷದ ಮಾಜಿ ನಾಯಕ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರನ್ನು ಎಐಸಿಸಿ ಅಧ್ಯಕ್ಷರನ್ನಾಗಿ ನೇಮಿಸಲಾಗುತ್ತಿದೆ ಎಂಬ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿದೆ.
ಜೂನ್ ಮೊದಲ ವಾರದಲ್ಲಿ ರಾಹುಲ್ ಗಾಂಧಿಯವರು ಎಐಸಿಸಿ ಅಧ್ಯಕ್ಷ ಸ್ಥಾನ ತೊರೆಯಲು ನಿರ್ಧರಿಸಿದಾಗಲೇ ಮಲ್ಲಿಕಾರ್ಜುನ ಖರ್ಗೆಯವರ ಹೆಸರು ಕೇಳಿಬರುತ್ತಿದ್ದರೂ ಕೂಡ ನಾನು ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ರೇಸ್ ನಲ್ಲಿಲ್ಲ ಎಂದು ಖರ್ಗೆಯವರು ಊಹಾಪೋಹವನ್ನು ನಿರಾಕರಿಸಿದ್ದಾರೆ.
ಈ ಕುರಿತು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಅವರು, ರಾಹುಲ್ ಗಾಂಧಿಯವರೊಬ್ಬರೇ ಪಕ್ಷವನ್ನು ಸಮರ್ಥವಾಗಿ ಮುನ್ನಡೆಸಲು ಸಾಧ್ಯವಿರುವುದರಿಂದ ಅವರೇ ಮುಂದುವರಿ.ಬೇಕೆಂದು ನಾನು ಬಯಸುತ್ತೇನೆ. ಜೂನ್ 27ರಂದು ಮಹಾರಾಷ್ಟ್ರದಲ್ಲಿ ಪಕ್ಷದ ಸಭೆಯಲ್ಲಿ ರಾಹುಲ್ ಗಾಂಧಿಯವರನ್ನು ಭೇಟಿ ಮಾಡುತ್ತೇನೆ ಎಂದಿದ್ದಾರೆ.
SCROLL FOR NEXT