ಬಸವರಾಜ್ ಹೊರಟ್ಟಿ 
ರಾಜಕೀಯ

ಸರ್ಕಾರಕ್ಕೆ ಕನ್ನಡ ಶಾಲೆಗಳ ಬಗ್ಗೆ ಕಾಳಜಿ ಇಲ್ಲ, ಆಂಗ್ಲಮಾಧ್ಯಮ ಶಾಲೆ ಕೈಬಿಡಿ: ಹೊರಟ್ಟಿ

ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಆಂಗ್ಲ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸಿರುವುದಕ್ಕೆ ಸ್ವಪಕ್ಷ ನಾಯಕ ಮೇಲ್ಮನೆ ಜೆಡಿಎಸ್...

ಧಾರವಾಡ: ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಆಂಗ್ಲ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸಿರುವುದಕ್ಕೆ ಸ್ವಪಕ್ಷ ನಾಯಕ ಮೇಲ್ಮನೆ ಜೆಡಿಎಸ್ ಸದಸ್ಯ ಬಸವರಾಜ ಹೊರಟ್ಟಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇಲ್ಲಿನ ರಾಜ್ಯ ಮಟ್ಟದ ಕನ್ನಡ ಭೋಧಕರ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರ್ಕಾರಕ್ಕೆ ಕನ್ನಡ ಭಾಷೆ, ಕನ್ನಡ ಶಾಲೆಗಳ ಬಗ್ಗೆ ಕಾಳಜಿ ಇಲ್ಲ. ಸರ್ಕಾರ ಆಂಗ್ಲಮಾಧ್ಯಮ ಶಾಲೆಗಳನ್ನು ಪ್ರಾರಂಭಿಸಿರುವುದರಿಂದ ಮಾತೃಭಾಷೆಯನ್ನು ಕಡೆಗಣಿಸಿದಂತಾಗುತ್ತದೆ. ಹೀಗಾಗಿ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭವನ್ನು ಕೈಬಿಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿರುವುದಾಗಿ ತಿಳಿಸಿದರು.
ಈ ವೇಳೆ ಮಾತನಾಡಿದ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು, ಸಚಿವಾಕಾಂಕ್ಷಿಯಾಗಿರುವ ಬಸವರಾಜ್ ಹೊರಟ್ಟಿಯವರು ಮೈತ್ರಿ ಸರ್ಕಾರದಲ್ಲಿ ಸಚಿವರಾಗಲು ಸಾಧ್ಯವಿಲ್ಲ. ಹೊರಟ್ಟಿಯವರು ಕನ್ನಡ ಮಾಧ‍್ಯಮ ಬಗ್ಗೆ ನೆಲ ಜಲ ಭಾಷೆ ಬಗ್ಗೆ ಅಭಿಮಾನ ಹೊಂದಿದ್ದಾರೆ. ಹೊರಟ್ಟಿಯಂತವರು ಈ ಸರ್ಕಾರಕ್ಕೆ ಅಗತ್ಯವಿಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

NICE ವಿವಾದ: ದೇವೇಗೌಡರು ಬೇಕಿದ್ರೆ ಕೋರ್ಟ್‌ಗೆ ಹೋಗಲಿ, ಉಪವಾಸ ಮಾಡಲಿ; ಮಾಜಿ ಪ್ರಧಾನಿ ಪತ್ರಕ್ಕೆ CM ಡಿಕೆಶಿ ತಿರುಗೇಟು

ಸಾಕು ಮಾಡಿ: ಸೇವಾಶ್ರಯ ಪ್ರಕರಣದಲ್ಲಿ ಕೊನೆಗೂ ಅಭಿಷೇಕ್ ಬ್ಯಾನರ್ಜಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್, ಬಂಧನಕ್ಕೆ ತಡೆ!

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌; ಶೇ. 7.5 ರಷ್ಟು ಮೀಸಲಾತಿ – ಕರಡು ನಿಯಮ ಪ್ರಕಟ

ಸ್ವಚ್ಛ ವಾಯು ಸರ್ವೇಕ್ಷಣ 2026: ಬೆಂಗಳೂರು, ಶ್ರೀನಗರ ಹಿಂದಿಕ್ಕಿದ ದೆಹಲಿ; ಅತ್ಯಂತ ಸ್ವಚ್ಛ ಗಾಳಿ ಯಾವ ನಗರದಲ್ಲಿದೆ ಗೊತ್ತಾ?

ಸತ್ಯ ನಿಕೇತನ ಪಿಜಿ ಕುಸಿತದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ದೆಹಲಿ ಹೈಕೋರ್ಟ್ ಆದೇಶ; ದುರಂತಕ್ಕೆ ಮಾಲೀಕನಷ್ಟೇ ಅಲ್ಲ MCD, DU ಸಹ ಹೊಣೆ!