ಮೈಸೂರು: ದೇಶದ ಭದ್ರತೆ ವಿಚಾರಕ್ಕೆ ಸಂಬಂಧಿಸಿದಂತೆ ಯಾರೋಬ್ಬರು ರಾಜಕೀಯ ಮಾಡಬಾರದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಭಾರತೀಯ ವಾಯು ಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಅವರನ್ನು ಪಾಕಿಸ್ತಾನ ಬಿಡುಗಡೆ ಮಾಡುತ್ತಿರುವುದು ಸಂತಸದ ವಿಚಾರ ಎಂದು ಹೇಳಿದ್ದಾರೆ.
ಇನ್ನೂ ಪಾಕಿಸ್ತಾನದ ಮೇಲೆ ನಡೆದ ವೈಮಾನಿಕ ದಾಳಿಯಿಂದ ಬಿಜೆಪಿ ಲೋಕಸಭೆಯಲ್ಲಿ 22 ಕ್ಷೇತ್ರ ಗೆಲ್ಲುತ್ತದೆ ಎಂಬ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಯಡಿಯೂರಪ್ಪ ವಿಷಯವನ್ನು ರಾಜಕೀಯಗೊಳಿಸಬಾರದು, ರಾಷ್ಟ್ರದ ಸುರಕ್ಷತೆ ಹಾಗೂ ಜನರ ಕಲ್ಯಾಣ ಹಾಗೂ ಸೈನಿಕರು ರಾಜಕೀಯಕ್ಕಿಂತ ಅತಿ ಹೆಚ್ಚು ಮುಖ್ಯ ಎಂದು ತಿಳಿಸಿದ್ದಾರೆ.