ಪ್ರಧಾನ ಮಂತ್ರಿ ನರೇಂದ್ರ ಮೋದಿ 
ರಾಜಕೀಯ

ಕರ್ನಾಟಕದ ಜನತೆ ಮೈತ್ರಿ ಸರ್ಕಾರದಿಂದ ಬೇಸತ್ತು ಹೋಗಿದ್ದಾರೆ: ಪ್ರಧಾನಿ ನರೇಂದ್ರ ಮೋದಿ

ಕರ್ನಾಟಕದ ಜನತೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಕಾರ್ಯವೈಖರಿಯಿಂದ ನೊಂದು ಹೋಗಿದ್ದಾರೆ...

ಬೆಂಗಳೂರು: ಕರ್ನಾಟಕದ ಜನತೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಕಾರ್ಯವೈಖರಿಯಿಂದ ಬೇಸತ್ತು ಹೋಗಿದ್ದಾರೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ಅವರು ನಿನ್ನೆ ದೇಶದಾದ್ಯಂತ ಪಕ್ಷದ ಕಾರ್ಯಕರ್ತರೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಮಹಾ ಸಂವಾದದಲ್ಲಿ ಮಾತನಾಡಿ, ರಾಜ್ಯದ ಪ್ರಗತಿ ಬಗ್ಗೆ ಗಮನಹರಿಸದೆ ಮೈತ್ರಿ ಸರ್ಕಾರದ ಪಕ್ಷಗಳು ಆಂತರಿಕ ರಾಜಕೀಯದಲ್ಲಿ ತೊಡಗಿವೆ ಎಂದು ಆರೋಪಿಸಿದರು.
ಕರ್ನಾಟಕದ ಜನತೆ ಮೈತ್ರಿ ಸರ್ಕಾರದಿಂದ ನೊಂದು ಹೋಗಿದ್ದಾರೆ. ಮೈತ್ರಿಕೂಟಗಳು ರಾಜಕೀಯದಲ್ಲಿ ಸಂಪುಟ ರಚನೆಯಲ್ಲಿ ತಲ್ಲೀನವಾಗಿದ್ದು ರಾಜ್ಯದ ಅಭಿವೃದ್ಧಿ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಟೀಕಿಸಿದರು. ಇನ್ನು ರೈತರ ಸಾಲಮನ್ನಾ ಒಂದು ತಮಾಷೆಯ ವಿಷಯವಾಗಿದೆ ಎಂದು ಪ್ರಧಾನಿ ಈ ಹಿಂದೆ ಹೇಳಿದ್ದರು.
ಪ್ರಧಾನಿ ಮೋದಿ ದೇಶಾದ್ಯಂತ ನಿನ್ನೆ ಸುಮಾರು 15 ಸಾವಿರ ಕಡೆಗಳಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಪಕ್ಷದ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದ್ದಾರೆ. ಅದರಲ್ಲಿ ಬೆಂಗಳೂರು ಕೂಡ ಸೇರಿದೆ. ಬೆಂಗಳೂರಿನಲ್ಲಿ ನಡೆದ ಸಂವಾದದಲ್ಲಿ ಸಂಸದ ಪಿ ಸಿ ಮೋಹನ್, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಇತರ ನಾಯಕರು ಪಾಲ್ಗೊಂಡಿದ್ದರು. ಬಿಜೆಪಿಯ ಸಾರ್ವಜನಿಕ ಅಭಿಯಾನವಾದ ಮೇರಾ ಬೂತ್ ಸಬ್ಸೆ ಮಜಬೂತ್ ನ ಭಾಗವಾಗಿದೆ ಈ ಸಂವಾದ.
ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ಕಾಂಗ್ರೆಸ್ ಮತ್ತು ಸ್ಥಳೀಯ ಪಕ್ಷಗಳು ಹೇಗೆ ಪ್ರಯತ್ನಿಸುತ್ತಿವೆ ಎಂದು ಪ್ರಧಾನಿ ಟೀಕಿಸಿದರು. ಕೇಂದ್ರದಲ್ಲಿ ಸರ್ಕಾರ ರಚಿಸಲು ಸ್ಥಳೀಯ ಪಕ್ಷಗಳು ಕಾಂಗ್ರೆಸ್ ನೊಂದಿಗೆ ಸೇರುತ್ತಿಲ್ಲ ಬದಲಾಗಿ ಕಾಂಗ್ರೆಸ್ ಗೆ ಉಳಿವಿನ ಪ್ರಶ್ನೆಯಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್