ಕಲಬುರಗಿ: ಚಿಂಚೋಳಿ ಶಾಸಕ ಡಾ. ಉಮೇಶ್ ಜಾಧವ್ ಮುಂದಿನ ವಾರ ಬಿಜೆಪಿ ಸೇರುವ ಸಾಧ್ಯತೆಯಿದೆ,
ಮಾರ್ಚ್ ಮೊದಲ ವಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಲಬುರಗಿಯಲ್ಲಿ ನಡೆಯುವ ಬಿಜೆಪಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ, ಈ ವೇಳೆ ಉಮೇಶ್ ಜಾಧವ್ ಪ್ರದಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಉಮೇಶ್ ಜಾಧವ್ ಈಗಾಗಲೇ ಸುಪ್ರೀಂ ಕೋರ್ಟ್ ನ ಹಿರಿಯ ವಕೀಲರ ಬಳಿ ಕಾನೂನು ಸಲಹೆ ಪಡೆದುಕೊಂಡಿದ್ದಾರೆ, ಮಾರ್ಚ್ 6 ರಂದು ಮೋದಿ ಕಲಬುರಗಿಗೆ ಆಗಮಿಸಲಿದ್ದು, ಅಷ್ಟರೊಳಗೆ ರಾಜೀನಾಮೆ ನೀಡಲು ನಿರ್ದರಿಸಿದ್ದಾರೆ ಎಂದು ತಿಳಿದು ಬಂದಿದೆ. ಇದೇ ವೇಳೆ ಕಲಬುರಗಿ ಕ್ಷೇತ್ರದಿಂದ ಉಮೇಶ್ ಜಾಧವ್ ಅವರನ್ನು ಲೋಕಸಭೆ ಅಭ್ಯರ್ಥಿ ಎಂದು ಘೋಷಿಸುವ ಸಾಧ್ಯತೆಯಿದೆ.