ಎಚ್,ಡಿ ದೇವೇಗೌಡ ಮತ್ತು ನಿಖಿಲ್ ಕುಮಾರಸ್ವಾಮಿ 
ರಾಜಕೀಯ

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿಯಿದ್ದರೇ ನಿಖಿಲ್ ಮಂಡ್ಯದಿಂದ ನಿಲ್ಲಲ್ಲಿ: ದೇವೇಗೌಡ

ಮಂಡ್ಯ ಕ್ಷೇತ್ರದಲ್ಲಿ ಮೊಮ್ಮಗ ನಿಖಿಲ್ ಸ್ಪರ್ಧಿಸಬೇಕೆಂದು ಅಭಿಮಾನಿಗಳು ಆಸೆ ಪಡುತ್ತಿದ್ದಾರೆ. ಆದರೆ ನಿಖಿಲ್ ಗೆ ಈಗಲೇ ಚುಣಾವಣಾ ಸ್ಪರ್ಧೆಯ ಬಗ್ಗೆ ಆಸಕ್ತಿಯಿಲ್ಲ. ...

ಮಂಗಳೂರು: ಮಂಡ್ಯ ಕ್ಷೇತ್ರದಲ್ಲಿ ಮೊಮ್ಮಗ ನಿಖಿಲ್ ಸ್ಪರ್ಧಿಸಬೇಕೆಂದು ಅಭಿಮಾನಿಗಳು ಆಸೆ ಪಡುತ್ತಿದ್ದಾರೆ. ಆದರೆ ನಿಖಿಲ್ ಗೆ ಈಗಲೇ ಚುಣಾವಣಾ ಸ್ಪರ್ಧೆಯ ಬಗ್ಗೆ ಆಸಕ್ತಿಯಿಲ್ಲ. ಎರಡು ವರ್ಷ ರಾಜಕೀಯ ಬೇಡ ಎನ್ನುತ್ತಿದ್ದಾನೆ. ಆದರೆ ಅಭಿಮಾನಿಗಳು ಒತ್ತಾಯ ಮಾಡುತ್ತಾರೆಂದರೆ ನಿಖಿಲ್ ಗೆ ಸ್ಪರ್ಧೆ ಮಾಡು ಎಂದು ನಾನೇ ಹೇಳಿದ್ದೇನೆ  ಮಾಜಿ  ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ. 
ಮಂಗಳೂರಿನಲ್ಲಿ ಮಾತನಾಡಿದ ಹೆಚ್.ಡಿ.ದೇವೇಗೌಡ, ಸುಮಲತಾ ಅವರು ಸ್ಪರ್ಧಿಸಲು ಅಪೇಕ್ಷೆ ಪಡುವುದರಲ್ಲಿ ಯಾವುದೇ ತಪ್ಪಿಲ್ಲ. ಆದರೆ ಮಂಡ್ಯ ಕ್ಷೇತ್ರ ಜೆಡಿಎಸ್ ನ ಕ್ಷೇತ್ರ ಎಂದು ಪರೋಕ್ಷವಾಗಿ ಸುಮಲತಾ ಅವರಿಗೆ ಟಾಂಗ್ ನೀಡಿದರು. 
ಪ್ರಜ್ವಲ್ ರೇವಣ್ಣನಿಗೆ ಹಾಸನದಲ್ಲಿ ಸ್ಪರ್ಧಿಸುವಂತೆ ನಾನೇ ಖುದ್ದಾಗಿ ಹೇಳಿದ್ದೇನೆ. ಈ ಬಗ್ಗೆ ಕಾರ್ಯಕರ್ತರನ್ನು ಕರೆಸಿ ಮಾತನಾಡಿದ್ದೇನೆ. ಇನ್ನು ನಿಖಿಲ್ ಕುಮಾರಸ್ವಾಮಿ ಮಂಡ್ಯ ಕ್ಷೇತ್ರದ ಆಕಾಂಕ್ಷಿ. ಅಲ್ಲಿನ ಪಕ್ಷದ ಮುಖಂಡರು ಕೂಡಾ ನಿಖಿಲ್ ಸ್ಪರ್ಧೆಗೆ ಒಲವು ತೋರುತ್ತಿದ್ದಾರೆ ಎಂದು ಹೇಳುವ ಮೂಲಕ ಇವರಿಬ್ಬರ ಸ್ಪರ್ಧೆಗೆ ಪರೋಕ್ಷ ಒಲವು ತೋರಿದ್ದಾರೆ ಎಂದು ಹೇಳಿದ್ದಾರೆ.
ಮಂಡ್ಯದಲ್ಲಿ ಸ್ಪರ್ಧಿಸಲು ಉತ್ಸುಕರಾಗಿರುವ ಸುಮಲತಾ ಅಂಬರೀಶ್ ಅವರನ್ನೇ ಜೆಡಿಎಸ್‌ಗೆ ಕರೆತಂದು ಟಿಕೆಟ್ ಕೊಡಿಸಬಹುದಲ್ಲವೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಜೆಡಿಎಸ್‌ನಿಂದ ಮಂಡ್ಯದಲ್ಲಿ ಸ್ಪರ್ಧಿಸಲು ಈಗಾಗಲೇ ನಿಖಿಲ್ ಮನಸ್ಸು ಮಾಡಿದ್ದಾರೆ. ನಮ್ಮಲ್ಲಿ ಬೇರೆಯವರೂ ಸ್ಪರ್ಧೆಗೆ ಒಲವು ತೋರಿದ್ದಾರೆ. ಹಾಗಿರುವಾಗ ಸುಮಲತಾ ಅವರನ್ನು ಜೆಡಿಎಸ್‌ಗೆ ಕರೆತಂದು ಟಿಕೆಟ್ ಕೊಡಿಸುವ ಬಗ್ಗೆ ಯಾವುದೇ ಪ್ರಯತ್ನ ನಡೆದಿಲ್ಲ ಎಂದು ಹೇಳಿದರು.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ