ಸುತ್ತೂರು ಮಠಕ್ಕೆ ಸುಮಲತಾ ಅಂಬರೀಷ್ ಭೇಟಿ 
ರಾಜಕೀಯ

ಸುತ್ತೂರು ಮಠಕ್ಕೆ ಸುಮಲತಾ ಭೇಟಿ: ಮಂಡ್ಯದಿಂದಲೇ ಕಾಂಗ್ರೆಸ್ ಟಿಕೆಟ್ ನಿಂದ್ ಸ್ಪರ್ಧಿಸುವ ವಿಶ್ವಾಸ!

ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕಣಕ್ಕಿಳಿಯಲು ಮುಂದಾಗಿರುವ ನಟಿ ಸುಮಲತಾ ಅಂಬರೀಷ್‌ ಅವರು ಶನಿವಾರ ಸುತ್ತೂರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಸ್ವಾಮೀಜಿ

ಮಂಡ್ಯ :  ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕಣಕ್ಕಿಳಿಯಲು ಮುಂದಾಗಿರುವ ನಟಿ ಸುಮಲತಾ ಅಂಬರೀಷ್‌ ಅವರು ಶನಿವಾರ ಸುತ್ತೂರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.  ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರ ಆಶೀರ್ವಾದ ಪಡೆದ ಬಳಿಕ ಸ್ವಾಮೀಜಿಯವರೊಂದಿಗೆ ಉಭಯಕುಶಲೋಪರಿ ನಡೆಸಿದರು. 
ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ''ಸ್ವಾಮೀಜಿಯವರು ನಮ್ಮ ಕುಟುಂಬಕ್ಕೆ ಮೊದಲಿನಿಂದಲೂ ಪರಿಚಯ. ಹೀಗಾಗಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದೇನೆ. ಪುತ್ರ ಅಭಿಷೇಕ್‌ ಸಿನಿಮಾದ ಟೀಸರ್ ತೋರಿಸಿ ಆಶೀರ್ವಾದ ಪಡೆದರು,
''ಪ್ರಸ್ತುತ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆಯೂ ಚರ್ಚೆ ನಡೆಸಿದ್ದು, ಜನರ ಅಭಿಪ್ರಾಯ ಸಂಗ್ರಹಿಸಲು ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಮಾಡುತ್ತಿದ್ದೇನೆ. ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ದೊರೆಯಲಿದ್ದು, ಮಂಡ್ಯದಿಂದ ಸ್ಪರ್ಧಿಸುವ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. 
ನಟ ಅಂಬರೀಶ್‌ ಅವರು ಬದುಕಿದ್ದಾಗ ಗೌರವ ಕೊಡುತ್ತಿದ್ದ ಕೆಲವರು ಈಗ ವ್ಯತಿರಿಕ್ತವಾಗಿ ಮಾತನಾಡುತ್ತಿದ್ದಾರೆ. ಅವರು ಮಾತನಾಡುವುದು ನಮಗೆ ಹೆಚ್ಚು ಧೈರ್ಯ ತರುತ್ತಿದೆ. ಕಾರಣ ಎಲ್ಲದಕ್ಕೂ ಜನ ಉತ್ತರ ಕೊಡುತ್ತಾರೆ ಎಂದು ನಟ, ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಹೇಳಿದ್ದಾರೆ. ಅಂಬರೀಶ್‌ ಅವರು ಬದುಕಿದ್ದಾಗ ಒಂದು ರೀತಿ ಆದರೆ, ಇಂದು ಪರಿಸ್ಥಿತಿ ಬೇರೆ. ಅವರು ಬದುಕಿದ್ದಾಗ ಅವರ ಮುಂದೆ ಮಾತನಾಡಲು ಆಗದಿದ್ದವರು ಈಗ ಏನೇನೋ ಮಾತನಾಡುತ್ತಿದ್ದಾರೆ, ಎಂದು ಬೇಸರ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ