ಬೆಂಗಳೂರು: ಕೇಂದ್ರ ಸರ್ಕಾರ ನೀಡಿದ ಅಮೃತ ಯೋಜನೆ, ಸ್ಮಾರ್ಟ್ ಸಿಟಿ ಯೋಜನೆ ಹಣವನ್ನು ರಾಜ್ಯ ಸರ್ಕಾರ ದುರುಪಯೋಗ ಮಾಡಿಕೊಂಡಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದ್ದಾರೆ.
ಸ್ಮಾರ್ಟ್ ಸಿಟಿ ಅನುದಾನ ವನ್ನು ಬೇರೆ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ. ಬಿಬಿಎಂಪಿಗೆ ನೀಡಿದ ಕಸದ ಹಣವನ್ನು ರಸ್ತೆ ಅಭಿವೃದ್ದಿಗೆ ಬಳಸಿಕೊಳ್ಳುವ ಮೂಲಕ ರಾಜ್ಯ ಸರ್ಕಾರ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ ಎಂದು ಅವರು ದೂರಿದ್ದಾರೆ.