ಬಿಎಸ್ ಯಡಿಯೂರಪ್ಪ 
ರಾಜಕೀಯ

ಲೋಕಸಭೆ ಚುನಾವಣೆ: ಮಾ.15ರೊಳಗೆ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ - ಬಿಎಸ್ ವೈ

ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಾರ್ಚ್ 15 ರೊಳಗೆ ಬಿಡುಗಡೆ ಮಾಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್....

ಮಂಗಳೂರು: ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಾರ್ಚ್ 15 ರೊಳಗೆ ಬಿಡುಗಡೆ ಮಾಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಶನಿವಾರ ಹೇಳಿದ್ದಾರೆ.
ಇಂದು ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಲೋಕಸಭೆ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಆಯ್ಕೆ ಸಂಬಂಧ ಈಗಾಗಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರೊಂದಿಗೆ ಮಾತುಕತೆ ನಡೆಸಿದ್ದು, 2-3 ದಿನದಲ್ಲಿ ಕೋರ್ ಕಮಿಟಿ ಸಭೆ ಸೇರಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗುವುದು ಎಂದರು.
ಹಾಲಿ ಶಾಸಕರಿಗೆ ಟಿಕೆಟ್ ಬೇಡ ಎಂಬ ವಿಚಾರವನ್ನು ರಾಷ್ಟ್ರೀಯ ಅಧ್ಯಕ್ಷರ ಗಮನಕ್ಕೆ ತಂದಿದ್ದೇನೆ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 22 ಸ್ಥಾನಗಳನ್ನು ಗೆಲ್ಲುವುದು ಖಚಿತ ಎಂದರು.
ಇದೇ ವೇಳೆ ಸುಮಲತಾ ಅಂಬರೀಷ್ ಅವರ ಬಗ್ಗೆ ಸಚಿವ ಎಚ್.ಡಿ.ರೇವಣ್ಣ ಅವರ ಹೇಳಿಕೆ ಸರಿಯಲ್ಲ ಎಂದ ಬಿಎಸ್ ವೈ, ಅವರ ಕೆಟ್ಟ ಹೇಳಿಕೆಗೆ ಮಂಡ್ಯ ಜಿಲ್ಲೆಯ ಜನರೇ ಉತ್ತರ ನೀಡಲಿದ್ದಾರೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026, qualifier 1: ಟಾಸ್ ಗೆದ್ದ GT ಬೌಲಿಂಗ್ ಆಯ್ಕೆ, ಕುತೂಹಲಕ್ಕೆ ಬ್ರೇಕ್, ವೆಂಕಟೇಶ್ ಅಯ್ಯರ್ ಗೆ ಸ್ಟಿಕ್ ಆದ RCB!

Bengaluru Rains: ಗುಡುಗು, ಸಿಡಿಲು ಸಹಿತ ಭಾರೀ ಮಳೆ; ಹಳಿ ಮೇಲೆ ಮರ ಬಿದ್ದು, ಮೆಟ್ರೋ ಸಂಚಾರ ವ್ಯತ್ಯಯ!

ಫೈನಲ್ ಫೈಟ್: ಸಿದ್ದರಾಮಯ್ಯ ಮನವೊಲಿಕೆಗೆ ರಾಹುಲ್ ಗಾಂಧಿ ಯತ್ನ; ಯತೀಂದ್ರಗೆ DCM ಸ್ಥಾನ, ರಾಜ್ಯಸಭೆ ಆಫರ್?

ಪಟ್ಟಕ್ಕಾಗಿ ಫೈನಲ್ ಫೈಟ್: ಮೂರು ಷರತ್ತುಗಳನ್ನು ಹೈಕಮಾಂಡ್ ಮುಂದಿಟ್ಟ ಡಿಕೆಶಿ; CM ಹುದ್ದೆಗಾಗಿ ಬಿಗಿಪಟ್ಟು!

SCROLL FOR NEXT