ರಾಜಕೀಯ

'ಲೋಕ'ಸಮರಕ್ಕೆ ಡೇಟ್ ಫಿಕ್ಸ್ ಬೆನ್ನಲ್ಲೇ ಕಾಂಗ್ರೆಸ್‌ಗೆ ಮಾಜಿ ಸಚಿವ ರಾಜಿನಾಮೆ: 'ಕೈ'ಗೆ ಭಾರಿ ಹಿನ್ನಡೆ!

Vishwanath S
ಕಲಬುರಗಿ: ಲೋಕಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಮಣಿಸಲು ಬಿಜೆಪಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದು ಈ ಮಧ್ಯೆ ಕಾಂಗ್ರೆಸ್ ಮಾಜಿ ಸಚಿವ, ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ ವೈಜನಾಥ ಪಾಟೀಲ್ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ.
ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ವೈಜನಾಥ್ ಅವರು ರಾಜಿನಾಮೆ ನೀಡಿರುವುದು ಕಾಂಗ್ರೆಸ್ ಪಕ್ಷ ಸಂಘಟನೆ ವಿಚಾರದಲ್ಲಿ ಹೈ-ಕ ಮಟ್ಟಿಗೆ ದೊಡ್ಡ ಹಿನ್ನಡೆಯಾಗಿ ಪರಿಣಮಿಸಿದೆ.
371(ಜೆ) ಕಾಯ್ದೆಯನ್ನು ಸರಿಯಾಗಿ ಅನುಷ್ಠಾನಗೊಳಿಸುತ್ತಿಲ್ಲ. ಈ ಭಾಗದ ಖಾಲಿ ಹುದ್ದೆಗಳನ್ನು ಭರ್ತಿ ಮಾಡುತ್ತಿಲ್ಲ. ಈ ಬಗ್ಗೆ ಗಮನಕ್ಕೂ ತಂದರೂ ರಾಜ್ಯ ಸರ್ಕಾರ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಹೈ-ಕ ಪ್ರದೇಶ ಅಭಿವೃದ್ಧಿ ಮಂಡಳಿ ಅನುದಾನ ಪೂರ್ಣವಾಗಿ ಖರ್ಚಾಗುತ್ತಿಲ್ಲ. ಇದರಿಂದ ನೊಂದು ರಾಜಿನಾಮೆ ಸಲ್ಲಿಸಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ರವಾನಿಸಿರುವ ರಾಜಿನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
ರಾಜಿನಾಮೆ ನೀಡಿರುವ ವೈಜನಾಥ್ ಅವರ ಮುಂದಿನ ನಡೆ ಏನೆಂಬುದು ಸದ್ಯಕ್ಕೆ ಕುತೂಹಲ ಕೆರಳಿಸಿದೆ.
SCROLL FOR NEXT