ಸಿದ್ದರಾಮಯ್ಯ ಮತ್ತು ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ಲೋಕಸಮರಕ್ಕೆ ಮೂಹೂರ್ತ ಫಿಕ್ಸ್ ಆದ್ರೂ ಸೀಟು ಹಂಚಿಕೆ ಸಂಬಂಧ ಇನ್ನೂ ಒಮ್ಮತಕ್ಕೆ ಬಾರದ ಮೈತ್ರಿ ಪಕ್ಷಗಳು!

ಭಾರತೀಯ ಚುನಾವಣಾ ಆಯೋಗ ಸೋಮವಾರ 2019ರ ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ, ಆದರೆ ಕರ್ನಾಟಕದಲ್ಲಿರುವ ಸಮ್ಮಿಶ್ರ ಸರ್ಕಾರದ ...

ಬೆಂಗಳೂರು: ಭಾರತೀಯ ಚುನಾವಣಾ ಆಯೋಗ ಸೋಮವಾರ 2019ರ ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ, ಆದರೆ ಕರ್ನಾಟಕದಲ್ಲಿರುವ ಸಮ್ಮಿಶ್ರ ಸರ್ಕಾರದ ಮೈತ್ರಿ ಪಕ್ಷಗಳು ಇನ್ನೂ ಸೀಟು ಹಂಚಿಕೆ ಗೊಂದಲದಲ್ಲೇ  ಮುಳುಗಿವೆ,
ಎರಡು ಪಕ್ಷಗಳ ರಾಷ್ಟ್ರೀಯ ನಾಯಕರು ವಿಶೇಷ ಸಭೆ ನಡೆಸಿದ್ದಾರೆ, ಜೊತೆಗೆ ಇಬ್ಬರು ವಿಶೇಷ ,ಸಂಧಾನಕಾರರನ್ನು ನೇಮಿಸಿದ್ದಾರೆ, ಆದರೂ ಇದುವರೆಗೂ ಸೀಟು ಹಂಚಿಕೆ ಪ್ರಕ್ರಿಯೆ ಮಾತ್ರ ಪೂರ್ಣಗೊಂಡಿಲ್ಲ.
ಕಾಂಗ್ರೆಸ್ ತನ್ನ ಪಕ್ಷದ ಹಾಲಿ ಸಂಸದರಿರುವ ಎಲ್ಲಾ ಕ್ಷೇತ್ರಗಳು ತನಗೆ ಬೇಕೆಂದು ಪಟ್ಟು ಹಿಡಿದಿದೆ, ಆದರೆ ಜೆಡಿಎಸ್ ಇದಕ್ಕೆ ಸುತರಾಂ ಒಪ್ಪುತ್ತಿಲ್ಲ, ಚುನಾವಣೆಗೆ ದಿನಾಂಕ ಘೋಷಣೆಗೂ ಮುನ್ನ ಎರಡು ಪಕ್ಷಗಳು ಸೀಟು ಹಂಚಿಕೆ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳಲಿವೆ ಎಂದು ನಿರೀಕ್ಷಿಸಲಾಗಿತ್ತು, ತಾವೇ ವಿಧಿಸಿಕೊಂಡಿದ್ದ ಅಂತಿಮ ಗಡುವು ಕೂಡ ಪೂರ್ಣಗೊಂಡಿದೆ. 
ಸೀಟು ಹಂಚಿಕೆ ಸಂಬಂಧ ನಮ್ಮ ಪಕ್ಷದ ವರಿಷ್ಠರು ನಿರ್ಧಾರ ಕೈಗೊಳ್ಳಲಿದ್ದಾರೆ. ಇನ್ನೂ ನಾಲ್ಕೈದು ದಿನಗಳಲ್ಲಿ ಎಂರಡು ಪಕ್ಷಗಳು ಅಂತಿಮ ನಿರ್ಧಾರ ಕೈಗೊಳ್ಳಲಿವೆ, ನಾನು ಸರ್ಕಾರದ ಬಗ್ಗೆ ಮಾತ್ರ ಗಮನ ಕೇಂದ್ರೀಕರಿಸುತ್ತಿದ್ದೇನೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ,ಸಿ ವೇಣುಗೋಪಾಲ್ ಮತ್ತು ಜೆಡಿಎಸ್ ನ ಡ್ಯಾನಿಶ್ ಅಲಿ ಸೀಟು ಹಂಚಿಕೆ ಲೆಕ್ಕಾಚಾರದ ಹೊಣೆ ಹೊತ್ತುಕೊಂಡಿದ್ದಾರೆ. ಯಾವ ಪಕ್ಷಕ್ಕೆ ಯಾವ ಕ್ಷೇತ್ರ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ,ಸೋಮವಾರ ಎಐಸಿಸಿ ಸ್ಕ್ಕೀನಿಂಗ್ ಕಮಿಟಿ ಸಭೆ ನಡೆಯಲಿದ್ದು, ಸೀಟು ಹಂಚಿಕೆ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. 
10 ಕ್ಷೇತ್ರಗಳನ್ನು ಹೊರತು ಪಡಿಸಿ, ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆಯೂ ಸಭೆ ಯಲ್ಲಿ ಚರ್ಚಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
 ಜೆಡಿಎಸ್ ಸಂಸದರಿರುವ ಹಾಸನ ಮತ್ತು ಮಂಡ್ಯ ಸೇರಿದಂತೆ 26 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ದಗೊಳಿಸಿದೆ,  ನಾಮಪತ್ರ ಸಲ್ಲಿಕೆಗೆ ಅಂತಿಮ ಗಡುವು ಇರುವ ಕಾರಣ, ಮೈತ್ರಿ ಪಕ್ಷಗಳು ಸದ್ಯ ಸೀಟು ಹಂಚಿಕೆ ಸಂಬಂಧ ಒತ್ತಡದಲ್ಲಿ ಸಿಲುಕಿವೆ, 
ಚಿಕ್ಕಬಳ್ಳಾಪುರ, ಮೈಸೂರು, ತುಮಕೂರು, ಮತ್ತು ಕೋಲಾರಗಳ ಸೀಟು ಹಂಚಿಕೆ ಸಂಬಂಧ ಮೈತ್ರಿ ಪಕ್ಷಗಳು ಹೊಂದಾಣಿಕೆ ಮಾಡಿಕೊಳ್ಳಲು ಬಯಸುತ್ತಿಲ್ಲ, ಇದು ಎರಡು ಪಕ್ಷಗಳಿಗೂ ದೊಡ್ಡ ತಲೆ ನೋವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್