ಸಾಂದರ್ಭಿಕ ಚಿತ್ರ 
ರಾಜಕೀಯ

ದೋಸ್ತಿಗಳ ಸೀಟು ಹಂಚಿಕೆ ಅಂತಿಮ: ಕಾಂಗ್ರೆಸ್ 20, ಜೆಡಿಎಸ್ 8 ಕ್ಷೇತ್ರಗಳಲ್ಲಿ ಸ್ಪರ್ಧೆ; 'ಕೈ'ತಪ್ಪಿದ ತುಮಕೂರು

ಹಲವು ದಿನಗಳಿಂದ ಜೆಡಿಎಸ್ ಹಾಗೂ ಕಾಂಗ್ರೆಸ್ ದೋಸ್ತಿಗೆ ಕಗ್ಗಂಟಾಗಿ ಪರಿಣಮಿಸಿದ್ದ ಸೀಟು ಹೊಂದಾಣಿಕೆ ಸಮಸ್ಯೆ ಬಗೆಹರಿದಿದೆ. ಕಾಂಗ್ರೆಸ್ 20 ಹಾಗೂ ಜೆಡಿಎಸ್ 8 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಒಮ್ಮತ ಮೂಡಿದೆ.

ಬೆಂಗಳೂರು: ಹಲವು ದಿನಗಳಿಂದ ಜೆಡಿಎಸ್ ಹಾಗೂ ಕಾಂಗ್ರೆಸ್ ದೋಸ್ತಿಗಳಿಗೆ ಕಗ್ಗಂಟಾಗಿ ಪರಿಣಮಿಸಿದ್ದ ಸೀಟು ಹೊಂದಾಣಿಕೆ ಸಮಸ್ಯೆ ಬಗೆಹರಿದಿದೆ. ರಾಜ್ಯದಲ್ಲಿನ 28 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 20 ಹಾಗೂ ಜೆಡಿಎಸ್ 8 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಒಮ್ಮತ ಮೂಡಿದೆ.

ಆದಾಗ್ಯೂ,  ಶಿವಮೊಗ್ಗ, ತುಮಕೂರು, ಹಾಸನ, ಮಂಡ್ಯ, ಬೆಂಗಳೂರು ಉತ್ತರ ಹಾಗೂ ವಿಜಯಪುರ, ಚಿಕ್ಕಮಗಳೂರು, ಉತ್ತರ ಕನ್ನಡ  ಕ್ಷೇತ್ರಗಳನ್ನು ಪಡೆದುಕೊಳ್ಳುವಲ್ಲಿ ಜೆಡಿಎಸ್ ಯಶಸ್ವಿಯಾಗಿದೆ.

ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಎಷ್ಟು ಸೀಟು ಹೊಂದಾಣಿಕೆ ಆಗಲಿದೆ ಎಂಬುದು ಇನ್ನೂ ನಿರ್ಧಾರವಾಗಿಲ್ಲ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇದೇ 15 ರಂದು ಘೋಷಣೆ ಮಾಡಲಿದ್ದಾರೆ ಎಂದು ಹೇಳಿದ ಕೆಲ ತಾಸುಗಳಲ್ಲೇ  ಸೀಟು ಹೊಂದಾಣಿಕೆ ಪಟ್ಟಿ ಬಿಡುಗಡೆಯಾಗಿದೆ.

ಆರಂಭದಿಂದಲೂ 12 ಕ್ಷೇತ್ರಗಳಿಗೆ ಸ್ಪರ್ಧಿಸುವುದಾಗಿ ಹೇಳುತ್ತಾ ಬಂದಿದ್ದ ಜೆಡಿಎಸ್ ನಂತರ 10 ಸ್ಥಾನಗಳನ್ನು ಬಿಟ್ಟುಕೊಡುವಂತೆ ಕಾಂಗ್ರೆಸ್ ಮೇಲೆ ಒತ್ತಡ ಹೇರಿತ್ತು. ಅದರಲ್ಲೂ ಮೈಸೂರು, ಚಿಕ್ಕಬಳ್ಳಾಪುರ, ಮಂಡ್ಯ ಜಿಲ್ಲೆಗಳಿಗೆ ಪಟ್ಟು ಹಿಡಿದಿತ್ತು. ಈ ವಿಚಾರದಲ್ಲಿ ಉಭಯ ಪಕ್ಷಗಳಲ್ಲಿ ಒಮ್ಮತ ಮೂಡದ  ಹಿನ್ನೆಲೆಯಲ್ಲಿ ಹಲವು ಸುತ್ತಿನ ಸಭೆ ನಡೆಸಲಾಗಿತ್ತು.

ಸಂಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಮೈಸೂರು ಕ್ಷೇತ್ರವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ತುಮಕೂರು ಕೈ ಪಡೆಯಿಂದ ಜಾರಿದ್ದು, ಜೆಡಿಎಸ್   ಪಕ್ಷಕ್ಕೆ ಬಿಟ್ಟುಕೊಟ್ಟಿದೆ. ಇದರಿಂದಾಗಿ ಈ  ಕ್ಷೇತ್ರದ ಹಾಲಿ ಸಂಸದ ಮುದ್ದ ಹನುಮೇಗೌಡರು ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಹಲವು ಕುಟುಂಬಗಳ ಹೆಣ್ಮಕ್ಕಳ ಮರ್ಯಾದೆ ಕಳೆದ ಪುಣ್ಯಾತ್ಮ ಡಿಕೆಶಿ; ಪ್ರಜ್ವಲ್​​ ಕೇಸ್​ ಹಿಂದಿದ್ದವರಿಂದ ಮಾಜಿ ಸಿಎಂ ಸ್ಟಿಂಗ್​​ ಆಪರೇಷನ್: HDK ಹೊಸ ಬಾಂಬ್

Jantar Mantar ಬಳಿ ಭಾರೀ ಹೈಡ್ರಾಮಾ: ಬ್ಯಾರಿಕೇಡ್ ದಾಟಿದ CJP ನಾಯಕರು ಪೊಲೀಸ್ ವಶಕ್ಕೆ; ಪ್ರತಿರೋಧ ನಿಷೇಧ ಸಾಧ್ಯವಿಲ್ಲ-ಕೇಂದ್ರದ ವಿರುದ್ಧ ದೀಪ್ಕೆ ಆಕ್ರೋಶ

Batman masks, offline maps: ನಟಿ ರಿಚಾ ಚಡ್ಡಾ ಐಡಿಯಾ ಫಾಲೋ ಮಾಡ್ತಿರುವ ಯುವಕರು; Facial recognition camera ಫುಲ್ ಕನ್‌ಫ್ಯೂಸ್, ದೆಹಲಿ ಪೊಲೀಸರು ತಬ್ಬಿಬ್ಬು..!

ಪಂಜಾಬ್: ಫೇಸ್‌ಬುಕ್ ಲೈವ್‌ನಲ್ಲಿರುವಾಗಲೇ ಮಾದಕವಸ್ತು ವಿರೋಧಿ ಹೋರಾಟಗಾರ ಪರ್ವಿಂದರ್ ಸಿಂಗ್ ಜೋತಾ ಗುಂಡೇಟಿಗೆ ಬಲಿ!

‘ಪ್ರತಿಭಟನೆ ನಮ್ಮ ಹಕ್ಕು, ಬಂಧನಗಳಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ’: ದೇಶಾದ್ಯಂತ ಚಳವಳಿ ವಿಸ್ತರಿಸಲು Cockroach Janta Party ಪಣ (INTERVIEW)