ರಾಜಕೀಯ

ಮಂಡ್ಯಕ್ಕೆ ಜೆಡಿಎಸ್ ಅಭ್ಯರ್ಥಿ ಫೈನಲ್: ಜ್ಯೋತಿಷಿಗಳ ಸಲಹೆಯಂತೆ ಶುಭಘಳಿಗೆಯಲ್ಲಿ ನಿಖಿಲ್‌ ಹೆಸರು ಘೋಷಣೆ

Shilpa D
ಮಂಡ್ಯ: ನಿನ್ನೆಯಷ್ಟೇ ದೋಸ್ತಿಗಳ ನಡುವೆ 20-8 ಮಾದರಿಯಲ್ಲಿ ಸೀಟು ಹಂಚಿಕೆ ಫೈನಲ್‌ ಆಗಿದೆ, ಈ ನಡುವೆ ಭಾರೀ ನಿರೀಕ್ಷೆಗೆ ಕಾರಣವಾಗಿದ್ದ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್‌ ಜೆಡಿಎಸ್‌ ಗೆ ಬಿಟ್ಟುಕೊಟ್ಟಿತ್ತು. ಇಂದು ಮಂಡ್ಯದಲ್ಲಿ ಜೆಡಿಎಸ್‌ ನ ಬೃಹತ್‌ ಸಾರ್ವಜನಿಕ ಸಮಾರಂಭದಲ್ಲಿ ಈ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿಯವರನ್ನು ಅಧಿಕೃತವಾಗಿ ಷೋಷಿಸಿದೆ.
ಮಂಡ್ಯದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದಲ್ಲಿ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಶಾಸಕರ ಸಮ್ಮುಖದಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಿದ್ದಾರೆ. 
ಮಂಡ್ಯದಲ್ಲಿ ಇಂದು ಜೆಡಿಎಸ್‌ ಬೃಹತ್‌ ಸಾರ್ವಜನಿಕ ಸಭೆಯನ್ನು ಆಯೋಜಿಸಿದ್ದು ಈ ಸಭೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು, ಮುಖ್ಯಮಂತ್ರಿ ಕುಮಾರಸ್ವಾಮಿಯವರು ಭಾಗವಹಿಸಲಿದ್ದಾರೆ.
 ದೇವೇಗೌಡರೇ ಮಂಡ್ಯ ಕ್ಷೇತ್ರಕ್ಕೆ ಮೈತ್ರಿ ಸರ್ಕಾರದ ಸರ್ವಾನುಮತದ ಅಭ್ಯರ್ಥಿಯಾಗಿ ನಿಖಿಲ್‌ ಹೆಸರನ್ನು ಘೋಷಿಸುತ್ತಾರೆಂದೇ ನಿರೀಕ್ಷಿಸಲಾಗಿತ್ತು. ಆದರೆ ಹನ್ನೆರಡು ಗಂಟೆಯೊಳಗೆ ಅಭ್ಯರ್ಥಿಯ ಹೆಸರನ್ನು ಘೋಷಿಸಬೇಕಾಗಿದ್ದ ಅನಿವಾರ್ಯತೆ ಇದ್ದುದರಿಂದ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಅವರೇ ವೇದಿಕೆಯಲ್ಲಿ ನಿಖಿಲ್‌ ಹೆಸರನ್ನು ಪ್ರಕಟಿಸಿದ್ದಾರೆ. 
ಜ್ಯೋತಿಷಿಗಳ ಸೂಚನೆಯಂತೆ ಹನ್ನೆರಡು ಗಂಟೆಯೊಳಗೆ ನಿಖಿಲ್‌ ಅಭ್ಯರ್ಥಿತನವನ್ನು ಘೋಸಿಸಬೇಕಾದ ಅನಿವಾರ್ಯತೆ ಇದ್ದಿರಬಹದೆಂದು ಇದೀಗ ಊಹಿಸಲಾಗುತ್ತಿದೆ
SCROLL FOR NEXT