ಯಡಿಯೂರಪ್ಪ, ಶೋಭಾ ಕರಂದ್ಲಾಜೆ 
ರಾಜಕೀಯ

ಅಂಬರೀಷ್ ಗೆ ಕುಮಾರಸ್ವಾಮಿ ಅಪಮಾನ: ಯಡಿಯೂರಪ್ಪ ಆರೋಪ

ರಾಜ್ಯಕ್ಕೆ ಅಂಬರೀಷ್ ಕೊಡುಗೆ ಏನು ಎಂದು ಪ್ರಶ್ನಿಸುವ ಮೂಲಕ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅಂಬಿಗೆ ಅಪಮಾನ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆರೋಪಿಸಿದ್ದಾರೆ.

ಶೃಂಗೇರಿ:  ರಾಜ್ಯಕ್ಕೆ ಅಂಬರೀಷ್ ಕೊಡುಗೆ ಏನು ಎಂದು ಪ್ರಶ್ನಿಸುವ ಮೂಲಕ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅಂಬಿಗೆ ಅಪಮಾನ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ  ಬಿ.ಎಸ್. ಯಡಿಯೂರಪ್ಪ ಆರೋಪಿಸಿದ್ದಾರೆ. ಈ ಮೂಲಕ ಪರೋಕ್ಷವಾಗಿ ಸುಮಲತಾ ಅಂಬರೀಷ್ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಂಡ್ಯ ರಾಜಕಾರಣ ತೀವ್ರ ಕುತೂಹಲ ಕೆರಳಿಸಿದ್ದು, ಕಾಂಗ್ರೆಸ್ ನಿಂದ ಟಿಕೆಟ್ ವಂಚಿತ ಸುಮಲತಾ ಅವರನ್ನು ಬಿಜೆಪಿ ಬೆಂಬಲಿಸಿದೆ ಎಂಬಂತಹ ಮಾತುಗಳು ಕೇಳಿಬರುತ್ತಿವೆ. ಇಂತಹ ಸಂದರ್ಭದಲ್ಲಿ ಯಡಿಯೂರಪ್ಪ ಈ ರೀತಿಯ ಹೇಳಿಕೆ ನೀಡಿರುವುದು ಪರೋಕ್ಷವಾಗಿ ಸುಮಲತಾ ಅವರನ್ನು ಬೆಂಬಲಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಶೃಂಗೇರಿಯ ಶಾರದಾ ಮಠಕ್ಕೆ ಭೇಟಿ ನೀಡಿದ್ದ ಯಡಿಯೂರಪ್ಪ ಹಾಗೂ ಶೋಭಾ ಕರಂದ್ಲಾಜೆ  ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು. ನಂತರ ಮಾತನಾಡಿದ ಅವರು, ಅಂಬರೀಷ್ ಜೀವಂತವಿದ್ದಾಗ ಅವರ ಬಗ್ಗೆ ತುಂಬ ಅಭಿಮಾನವಿತ್ತು ಎಂದು ಹೇಳಿಕೊಂಡಿದ್ದವರು ಈಗ ಇಂತಹ ಹೇಳಿಕೆ ನೀಡಿದ್ದೇಕೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಯಾವುದೇ ಬದಲಾವಣೆ ಇಲ್ಲ, ಶೋಭಾ ಕರಂದ್ಲಾಜೆ ಅವರೇ ಸ್ಪರ್ಧಿಸಲಿದ್ದು, ಭಾರಿ ಅಂತರದಲ್ಲಿ ಅವರು ಜಯಗಳಿಸಲಿದ್ದಾರೆ.ರಾಜ್ಯದಲ್ಲಿ ಬಿಜೆಪಿ 22 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!