ಸಾಂದರ್ಭಿಕ ಚಿತ್ರ 
ರಾಜಕೀಯ

ಉಡುಪಿ-ಚಿಕ್ಕಮಗಳೂರು, ಉ.ಕ ಜಿಲ್ಲೆಗಳಲ್ಲಿ ಬಿಜೆಪಿಗೆ ಗೆಲುವು ಸುಲಭ: ರಾಜಕೀಯ ಪಂಡಿತರ ಲೆಕ್ಕಾಚಾರ

ಉತ್ತರ ಕನ್ನಡ ಮತ್ತು ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿರುವ...

ಬೆಂಗಳೂರು: ಉತ್ತರ ಕನ್ನಡ ಮತ್ತು ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿರುವ ಕಾಂಗ್ರೆಸ್ ಸೀಟು ಹಂಚಿಕೆ ಒಪ್ಪಂದದಲ್ಲಿ ನಿರಾಯಾಸವಾಗಿ ಬಿಜೆಪಿಗೆ ಕ್ಷೇತ್ರ ಬಿಟ್ಟುಕೊಟ್ಟಿದಿಯೇ ಎಂಬ ಪ್ರಶ್ನೆ ಉಂಟಾಗುತ್ತದೆ. ಈ ಕ್ಷೇತ್ರಗಳಲ್ಲಿ ಜೆಡಿಎಸ್ ನ ಅಸ್ಥಿತ್ವ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬ ರೀತಿಯಲ್ಲಿ ಎಂದು ಹೇಳುತ್ತದೆ ಅಂಕಿಅಂಶ.
ಈ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಪ್ರಾಬಲ್ಯ ಅಧಿಕವಾಗಿದ್ದು ಉತ್ತರ ಕನ್ನಡದಲ್ಲಿ ಅನಂತ್ ಕುಮಾರ್ ಹೆಗ್ಡೆ ಮತ್ತು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ಸಂಸದೆಯಾಗಿದ್ದಾರೆ.
2014ರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಗೆ ಉತ್ತರ ಕನ್ನಡದಲ್ಲಿ 1.33 ಲಕ್ಷ, ಕಾಂಗ್ರೆಸ್ ಅಭ್ಯರ್ಥಿ ಪ್ರಶಾಂತ್ ದೇಶಪಾಂಡೆಗೆ ಸುಮಾರು 4 ಲಕ್ಷ ಮತಗಳು ಬಂದಿವೆ. ಬಿಜೆಪಿ ಅಭ್ಯರ್ಥಿ ಅನಂತ್ ಕುಮಾರ್ ಹೆಗ್ಡೆ ಒಟ್ಟು 5.46 ಲಕ್ಷ ಮತಗಳನ್ನು ಪಡೆದು ಜಯ ಗಳಿಸಿದ್ದರು. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಮತ ಸಂಪೂರ್ಣವಾಗಿ ಜೆಡಿಎಸ್ ಗೆ ಹೋದರೆ ಗೆಲ್ಲಬಹುದು. ಕಾರವಾರದಲ್ಲಿ ಹಿಂದಿನ ಚುನಾವಣೆಯಲ್ಲಿ ಸೋತಿದ್ದ ಆನಂದ್ ಅಸ್ನೋಟಿಕರ್ ಕಾಂಗ್ರೆಸ್ ಮತ್ತು ಜೆಡಿಎಸ್ ಒಟ್ಟಾಗಿ ಈ ಬಾರಿಯ ಚುನಾವಣೆಯಲ್ಲಿ ಕೆಲಸ ಮಾಡಿದರೆ ಗೆಲ್ಲಬಹುದು.
ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಸುಮಾರು 4 ಲಕ್ಷ ಮತಗಳು ಮತ್ತು ಜೆಡಿಎಸ್ ಗೆ ಹಿಂದಿನ ಚುನಾವಣೆಯಲ್ಲಿ ಸುಮಾರು 1.44 ಲಕ್ಷ ಮತಗಳು ಬಂದಿದ್ದವು. ಒಟ್ಟಾಗಿ ನೋಡಿದರೆ ಬಿಜೆಪಿ ಪಡೆದ 5.51 ಲಕ್ಷ ಮತಗಳಿಂದ ಕಡಿಮೆಯೇ ಇದೆ. ಉಡುಪಿ-ಚಿಕ್ಕಮಗಳೂರಿನಲ್ಲಿ ಜೆಡಿಎಸ್ ಪ್ರಾಬಲ್ಯ ಕಡಿಮೆಯೇ. ಕಾಂಗ್ರೆಸ್ ಶೇಕಡಾ 90ರಷ್ಟು ಮತ ಗಳಿಸಿದರೆ ಈ ಬಾರಿ ಮೈತ್ರಿಕೂಟದ ಅಭ್ಯರ್ಥಿಯ ಗೆಲುವು ಕಾಣಬಹುದಷ್ಟೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

DIG ಸೋಮಶೇಖರ್ ಕಾಮಕಾಂಡ ಬಟಾಬಯಲು: ಅಪರಾಧಿ ಪತ್ನಿಗೆ ವಿಡಿಯೋ ಕಾಲ್; ಬೆತ್ತಲಾಗುವಂತೆ ಒತ್ತಡ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!