ಸಿದ್ದರಾಮಯ್ಯ 
ರಾಜಕೀಯ

ನಮ್ಮ ಯುಪಿಎ ಸರ್ಕಾರದಲ್ಲಿ 12-13 ಸರ್ಜಿಕಲ್ ಸ್ಟ್ರೈಕ್ ನಡೆದಿತ್ತು, ನಾವು ಹೇಳಿಕೊಂಡಿರಲಿಲ್ಲ: ಸಿದ್ದರಾಮಯ್ಯ

ಬಿಜೆಪಿಯವರು ಒಂದೆರೆಡು ಸರ್ಜಿಕಲ್ ಸ್ಟ್ರೈಕ್ ಮಾಡಿ ಬೆನ್ನು ತಟ್ಟಿಕೊಳ್ಳುತ್ತಿದ್ದಾರೆ. ನಮ್ಮ ಯುಪಿಎ ಅವಧಿಯಲ್ಲಿ 12-13 ಸರ್ಜಿಕಲ್ ಸ್ಟ್ರೈಕ್ ನಡೆದಿತ್ತು.

ಮೈಸೂರು: ಬಿಜೆಪಿಯವರು ಒಂದೆರೆಡು ಸರ್ಜಿಕಲ್ ಸ್ಟ್ರೈಕ್ ಮಾಡಿ ಬೆನ್ನು ತಟ್ಟಿಕೊಳ್ಳುತ್ತಿದ್ದಾರೆ. ನಮ್ಮ ಯುಪಿಎ ಅವಧಿಯಲ್ಲಿ 12-13 ಸರ್ಜಿಕಲ್ ಸ್ಟ್ರೈಕ್ ನಡೆದಿತ್ತು. ನಾವು ಇದನ್ನು ಪ್ರಚಾರಕ್ಕೆ ಬಳಸಿಕೊಂಡಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಮಾಜಿ ಪ್ರಧಾನಿ, ದಿವಂಗತೆ ಇಂದಿರಾ ಗಾಂಧಿ ಸರ್ಕಾರದ ಅವಧಿಯಲ್ಲಿ ಬಾಂಗ್ಲಾ ಯುದ್ಧದಲ್ಲಿ ಪಾಕಿಸ್ತಾನ ಶರಣಾಗಿದ್ದು ಗೊತ್ತಿಲ್ಲವಾ? ಅದಕ್ಕಿಂತಲು ದೊಡ್ಡದಾ ಈ ಸರ್ಜಿಕಲ್ ಸ್ಟ್ರೈಕ್? ದೇಶದ ರಕ್ಷಣೆ ವಿಚಾರವನ್ನು ಕಾಂಗ್ರೆಸ್ ಯಾವತ್ತೂ ರಾಜಕಾರಣಕ್ಕೆ ಬಳಸಿಕೊಂಡಿಲ್ಲ. ಬಿಜೆಪಿಯವರು ಯಾವತ್ತೂ ಅಭಿವೃದ್ಧಿ ವಿಚಾರದಲ್ಲಿ ರೈತರ ವಿಚಾರದಲ್ಲಿ ಮತ ಕೇಳಿದ್ದಾರಾ? ಭಾವನಾತ್ಮಕ ವಿಚಾರ ಇಟ್ಟುಕೊಂಡು ಅವರು ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು. 
ಮೈಸೂರಿಗೆ ಪ್ರತಾಪ್ ಸಿಂಹ ಕೊಡುಗೆ ಏನು?
ಇದೇ ವೇಳೆ ಸಂಸದ ಪ್ರತಾಪ್ ಸಿಂಹ ಮೈಸೂರಿಗೆ ಏನು ಮಾಡಿದ್ದಾರೆ. ನಾವು ಮಾಡಿದ ಕೆಲಸವನ್ನು ತಾನು ಮಾಡಿದ್ದು ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ ಎಂದರು. ಅಲ್ಲದೆ ಪ್ರತಾಪ್ ಸಿಂಹ ಮಟ್ಟಕ್ಕೆ ಇಳಿದು ನಾನು ಮಾತನಾಡುವುದಿಲ್ಲ. ಪ್ರತಾಪ್ ಮಾತ್ರವಲ್ಲ, ಬಿಜೆಪಿ ಯಾವ ಸಂಸದರೂ ಯಾವ ಕೆಲಸವನ್ನು ಮಾಡಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು

ಚಿಂತಾಮಣಿಯ Dictator, ನಿನ್ನ ವಿರುದ್ಧ ಸಮರ ನಿರಂತರ: ಎಂಸಿ ಸುಧಾಕರ್ ವಿರುದ್ಧ ಪ್ರದೀಪ್ ಈಶ್ವರ್ ಮತ್ತೆ ಕಿಡಿ

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ, ಕಾರು ಆಪೋಷನ, ಕೂದಲೆಳೆ ಅಂತರದಲ್ಲಿ ಚಾಲಕ ಬಚಾವ್-Video