ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ದೇವೇಗೌಡ, ಕುಮಾರಸ್ವಾಮಿ ಪರಮಾಪ್ತ ಡ್ಯಾನಿಷ್ ಅಲಿ ಬಿಎಸ್‌ಪಿಗೆ ಸೇರ್ಪಡೆ!

ಹೆಚ್ ಡಿ ದೇವೇಗೌಡ, ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪರಮಾಪ್ತ, ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಷ್ ಅಲಿ ಜೆಡಿಎಸ್ ಗೆ ಗುಡ್ ಬೈ ಹೇಳಿ ಬಿಎಸ್‌ಪಿಗೆ ಸೇರ್ಪಡೆಯಾಗಿದ್ದಾರೆ.

ಡ್ಯಾನಿಷ್ ಅಲಿ-ದೇವೇಗೌಡ, ಕುಮಾರಸ್ವಾಮಿ
Vishwanath S
Updated On : 16 Mar 2019, 6:17 am
ಬೆಂಗಳೂರು: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪರಮಾಪ್ತ, ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಷ್ ಅಲಿ ಜೆಡಿಎಸ್ ಗೆ ಗುಡ್ ಬೈ ಹೇಳಿ ಬಿಎಸ್‌ಪಿಗೆ ಸೇರ್ಪಡೆಯಾಗಿದ್ದಾರೆ.
ಮಾಯಾವತಿ ಸ್ಥಾಪಿತ ಬಹುಜನ ಸಮಾಜವಾದಿ ಪಕ್ಷ(ಬಿಎಸ್‌ಪಿ)ಕ್ಕೆ ಡ್ಯಾನಿಷ್ ಅಲಿ ಸೇರ್ಪಡೆಯಾಗಿದ್ದು ಉತ್ತರಪ್ರದೇಶದಲ್ಲಿ ಲೋಕಸಭೆ ಚುನಾವಣೆಗೆ ಸ್ಫರ್ಧಿಸುವ ಸಾಧ್ಯತೆಗಳಿವೆ. 
ಮೈತ್ರಿಗಾಗಿ ಡ್ಯಾನಿಷ್ ಅಲಿ ಬಿಎಸ್‍ಪಿ ಸೇರ್ಪಡೆ -ಎಚ್‍ಡಿಕೆ

Advertisement

Advertisement

ಜೆಡಿಎಸ್ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿಯಾಗಿರುವ ಡ್ಯಾನಿಷ್ ಅಲಿ ತಮ್ಮ ಹಾಗೂ ಪಕ್ಷದ ವರಿಷ್ಠ ದೇವೇಗೌಡ ಅವರ ಒಪ್ಪಿಗೆಯ ಮೇರೆಗೆ ಬಿಎಸ್‍ಪಿ ಸೇರಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಡ್ಯಾನಿಷ್ ಅಲಿ ಜೆಡಿಎಸ್ ತೊರೆದು ಬಿಎಸ್‍ಪಿ ಸೇರ್ಪಡೆಗೊಂಡಿರುವ ಕುರಿತು ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಅವರು, ಲೋಕಸಭಾ ಚುನಾವಣೆಗೆ ಬಿಎಸ್‍ಪಿ ಹಾಗೂ ಜೆಡಿಎಸ್‍ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದು, ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಮೈತ್ರಿ ಪಕ್ಷಗಳು ಗೆಲ್ಲಬೇಕಿದೆ. ರಾಜಕೀಯ ಒಪ್ಪಂದದಂತೆ ಡ್ಯಾನಿಷ್ ಅಲಿ ಅವರು ಬಿಎಸ್‍ಪಿ ಸೇರಿದ್ದಾರೆ ಎಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments