ರಾಜಕೀಯ

ದೆಹಲಿಯಲ್ಲಿ ಕೋಲಾರ ಸಂಸದ ಮುನಿಯಪ್ಪ ಪರ-ವಿರೋಧಿ ತಂಡಗಳ ಬೀಡು!

Sumana Upadhyaya
ಕೋಲಾರ: ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಕೆ ಎಚ್ ಮುನಿಯಪ್ಪ ಅವರಿಗೆ ಮೊದಲ ಬಾರಿಗೆ ಪಕ್ಷದಲ್ಲಿಯೇ ವಿರೋಧ ವ್ಯಕ್ತವಾಗಿದೆ. ಸ್ಪೀಕರ್ ರಮೇಶ್ ಕುಮಾರ್ ನೇತೃತ್ವದಲ್ಲಿ ಕೋಲಾರ ಜಿಲ್ಲೆಯ ಶಾಸಕರ ಗುಂಪೊಂದು ಏಳು ಬಾರಿ ಸಂಸದರಾಗಿರುವ ಮುನಿಯಪ್ಪ ಅವರಿಗೆ ಈ ಬಾರಿ ಟಿಕೆಟ್ ನೀಡದಂತೆ ಪಕ್ಷದ ಹೈಕಮಾಂಡ್ ನಲ್ಲಿ ಒತ್ತಾಯಿಸುತ್ತಿದ್ದಾರೆ.
ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ಮತ್ತೊಂದು ಗುಂಪು ಉಪ ಸ್ಪೀಕರ್ ಜೆ ಕೃಷ್ಣಾ ರೆಡ್ಡಿ ನೇತೃತ್ವದಲ್ಲಿ ಹಿರಿಯ ಸಂಸದ ಮುನಿಯಪ್ಪ ಅವರಿಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸುತ್ತಿದೆ. ಈ ಎರಡೂ ಗುಂಪುಗಳು ದೆಹಲಿಯಲ್ಲಿ ಬೀಡುಬಿಟ್ಟಿದೆ.
ಈ ಎರಡೂ ಗುಂಪುಗಳಲ್ಲಿರುವ ಭಿನ್ನಮತ ಇನ್ನೂ ಹೈಕಮಾಂಡ್ ಅಂಗಳಕ್ಕೆ ತಲುಪಿಲ್ಲ. ಮೂಲಗಳಿಂದ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ಸಿಕ್ಕಿರುವ ಮಾಹಿತಿ ಪ್ರಕಾರ, ಭಿನ್ನಮತೀಯರನ್ನು ದೆಹಲಿಯಲ್ಲಿಯೇ ಶಮನಗೊಳಿಸಲು ಹೈಕಮಾಂಡ್ ನಿರ್ಧರಿಸಿದ್ದು ಮುಂದಿನ ಎರಡು ದಿನಗಳಲ್ಲಿ ಮುನಿಯಪ್ಪ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆಯಿದೆ ಎನ್ನಲಾಗಿದೆ.
SCROLL FOR NEXT