ಶಾಣಪ್ಪ 
ರಾಜಕೀಯ

ಲೋಕಸಭೆ ಚುನಾವಣೆ ಹಿನ್ನೆಲೆ: ಮುಂದುವರಿದ ನಾಯಕರುಗಳ 'ಜಿಗಿಜಿಗಿತ'; ಬಿಜೆಪಿ ಮುಖಂಡ ಶಾಣಪ್ಪ ರಾಜಿನಾಮೆ

ವಿಧಾನ ಪರಿಷತ್‌ ಮಾಜಿ ಸದಸ್ಯ ಮತ್ತು ಬಿಜೆಪಿ ಮುಖಂಡ ಕೆ.ಬಿ.ಶಾಣಪ್ಪ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು....

ಕಲಬುರಗಿ: ವಿಧಾನ ಪರಿಷತ್‌ ಮಾಜಿ ಸದಸ್ಯ ಮತ್ತು ಬಿಜೆಪಿ ಮುಖಂಡ ಕೆ.ಬಿ.ಶಾಣಪ್ಪ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಶೀಘ್ರದಲ್ಲಿ ಕಾಂಗ್ರೆಸ್‌ ಸೇರುವುದಾಗಿ ತಿಳಿಸಿದ್ದಾರೆ. 
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಮೇಶ್‌ ಜಾಧವ್‌ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವಾಗ ಮುಖಂಡರು ಸ್ಥಳೀಯ ನಾಯಕರನ್ನು ಕಡೆಗಣಿಸಿದ್ದಾರೆ. ಸ್ಥಳೀಯರನ್ನು ಸಂಪರ್ಕಿಸದೆ ಜಾಧವ್‌ ಅವರನ್ನು ಖರ್ಗೆ ವಿರುದ್ಧ ಕಣಕ್ಕಿಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆರೋಪಿಸಿದರು.
ಶೀಘ್ರದಲ್ಲಿ ತಾವು ಕಾಂಗ್ರೆಸ್‌ ಸೇರಲಿದ್ದು, ಏ.23 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಹಾಗೂ ಮಲ್ಲಿಕಾರ್ಜುನ ಖರ್ಗೆಗೆ ಬೆಂಬಲ ನೀಡುವುದಾಗಿ ಅವರು ಘೋಷಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

'ಮೊದಲು ನಿಮ್ಮ ಅಮೆರಿಕದಲ್ಲಿ ಕೈಗೆಟುಕುವ ದರದಲ್ಲಿ ಸೇವೆ ಒದಗಿಸಿ': ಒತ್ತಡಕ್ಕೆ ಭಾರತ ಮಣಿಯಲ್ಲ; ಎಲಾನ್ ಮಸ್ಕ್ ವಿರುದ್ಧ ನಿಶಿಕಾಂತ್ ದುಬೆ

'ನನ್ನನ್ನಲ್ಲ, ನಿಮ್ ಗಂಡನ ಗುರಾಯಿಸಿ', ಜಯಾ ಬಚ್ಚನ್‌ ಖಡಕ್ ನೋಟಕ್ಕೆ ಫೋಟೋಗ್ರಾಫರ್ ತಿರುಗೇಟು! Video

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ