ರಾಜಕೀಯ

ನಮ್ಮಲ್ಲಿನ ಸಮಸ್ಯೆಗಳಿಗೆ ಪರಿಹಾರ ಒದಗಿಸಿ: ಸಿಎಂ ಕುಮಾರಸ್ವಾಮಿಗೆ ಕಾಂಗ್ರೆಸ್ ಶಾಸಕರ ಮೊರೆ

Raghavendra Adiga
ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಶಾಸಕರು ಕಾಂಗ್ರೆಸ್ ಶಾಸಕಾಂಗ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ಷೇತ್ರದ ಅಭಿವೃದಿ ಕುರಿತಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಜತೆ ಚರ್ಚಿಸಬೇಕೆಂದು ಒತ್ತಾಯಿಸಿದ್ದಾರೆ.
ಸಮ್ಮಿಶ್ರ ಸರ್ಕಾರದ ಅಂಗಪಕ್ಷಗಳ ನಡುವಿನ ಸೀಟು ಹಂಚಿಕೆ ಒಪ್ಪಂದದಂತೆ ಬೆಂಗಲೂರು ಉತ್ತರ ಲೋಕಸಭೆ ಕ್ಷೇತ್ರ ಜೆಡಿಎಸ್ ಪಾಲಾಗಿದೆ. ಈಗ ಅಲ್ಲಿನ ಜೆಡಿಎಸ್ ಅಭ್ಯರ್ಥಿಗೆ ಕಾಂಗ್ರೆಸ್ ಶಾಅಸಕರು ಬೆಂಬಲಿಸಬೇಕಾಗಿದೆ.ಈ ನಡುವೆ ಬೆಂಗಳೂರು ಉತ್ತರ ಅಥವಾ ತುಮಕೂರಿನಿಂದ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಸ್ಪರ್ಧಿಸುವ ಸಾಧ್ಯತೆ ಇದ್ದು  ಕಾಂಗ್ರೆಸ್ ಶಾಸಕರು ತಮ್ಮ ಮೈತ್ರಿ ಪಕ್ಷದ ಪರ ಕೆಲಸ ಮಾಡುವದಕ್ಕೆ ಮುನ್ನ ತಮ್ಮಲ್ಲಿರುವ ಗೊಂದಲ, ಆತಂಕವನ್ನು ಬಗೆಹರಿಸಲು ಮುಖ್ಯಮಂತ್ರಿಗಳಿಗೆ ಒತ್ತಾಯಿಸಬೇಕು ಎಂದು ಕೋರಿದ್ದಾರೆ.
ಶಾಸಕರಾದ ಎಸ್.ಟಿ ಸೋಮಶೇಖರ್, ಬೈರತಿ  ಬಸವರಾಜ್ ಮತ್ತು ಅಖಂಡ ಶ್ರೀನಿವಾಸ ಮೂರ್ತಿ ಅವರುಗಳು ತಾವು ಜೆಡಿಎಸ್ ಪರ ಪ್ರಚಾರ ಕೈಗೊಳ್ಳುವುದಾಗಿ ಭರವಸೆ ನೀಡಿದ್ದು ಇದಕ್ಕೆ ಮುನ್ನ ಸಿದ್ದರಾಮಯ್ಯ ತಮ್ಮ ಪರ ಕಾಳಜಿ ವ್ಯಕ್ತಪಡಿಸುವುದನ್ನು ಖಚಿತಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
"ಈ ಹಿಂದಿನ ಎಲ್ಲಾ ವಿಧಾನಸಭೆ ಚುನಾವಣೆಗಳಲ್ಲಿ ನಾವು ಜೆಡಿಎಸ್ ವಿರುದ್ಧ ಹೋರಾಟ ನಡೆಸಿದ್ದೇವೆ. ಆದರೆ ಈಗ ಜೆಡಿಎಸ್ ಪರ ಪ್ರಚಾರ ಮಾಡಬೇಕಿದೆ. ಇದಕ್ಕೆ ಕ್ಷೇತ್ರದ ಕಾರ್ಯಕರ್ತರ ಅಸಮಾಧಾನವಿದೆ. ಆದರೆ ಪಕ್ಷದ ನಾಯಕರ ಅಭಿಪ್ರಾಯಕ್ಕೆ ಮನ್ನಣೆ ನೀಡಿ ನಾವು ಈ ಕೆಲಸ ಕೈಗೊಳ್ಳುತ್ತಿದ್ದೇವೆ"ಶಾಸಕರು ಮಾಜಿ ಮುಖ್ಯಮಂತ್ರಿಗೆ ತಿಳಿಸಿದರು.
"ನಾವು ನಮ್ಮ ಕ್ಷೇತ್ರಗಳಲ್ಲಿ ಹಲವಾ ಸಮಸ್ಯೆಗಳನ್ನು ಹೊಂದಿದ್ದು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ಇವುಗಳನ್ನು ಚರ್ಚಿಸಲು ಸಭೆ ನಡೆಸಬೇಕು" ಎಂದು ಅವರು ಹೇಳಿದರು ಮುಂದಿನ ಎರಡು ಅಥವಾ ಮೂರು ದಿನಗಳಲ್ಲಿ ಕಾಂಗ್ರೆಸ್ ಶಾಅಸಕರೊಡನೆ ಸಭೆ ನಡೆಯಲಿದೆ ಎಂದು ಮೂಲಗಳು ಹೇಳಿದೆ.
SCROLL FOR NEXT