ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ಗಂಡಸ್ತನ ಇಲ್ಲದವರೂ ಮದುವೆಯಾಗ್ತಾರೆ, ಆದರೆ ಮಕ್ಕಳಾಗಲ್ಲ; ಮೋದಿ ಬಗ್ಗೆ ಕಾಂಗ್ರೆಸ್ ಶಾಸಕ ಹೇಳಿಕೆ!

ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ನಾಯಕರ ಎಲುಬಿಲ್ಲದ ನಾಲಿಗೆಯಿಂದ ವಿಕೃತ ಪದಗಳು ಹೊರಬರುತ್ತಿದ್ದು ಕಾಂಗ್ರೆಸ್ ಬಸವಕಲ್ಯಾಣ ಶಾಸಕ ನಾರಾಯಣ...

ಸಂಗ್ರಹ ಚಿತ್ರ
Vishwanath S
Updated On : 18 Mar 2019, 5:16 am
ಬಸವಕಲ್ಯಾಣ: ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ನಾಯಕರ ಎಲುಬಿಲ್ಲದ ನಾಲಿಗೆಯಿಂದ ವಿಕೃತ ಪದಗಳು ಹೊರಬರುತ್ತಿದ್ದು ಕಾಂಗ್ರೆಸ್ ಬಸವಕಲ್ಯಾಣ ಶಾಸಕ ನಾರಾಯಣರಾವ್, ಗಂಡಸ್ತನ ಇಲ್ಲದವರೂ ಮದುವೆಯಾಗ್ತಾರೆ, ಆದರೆ ಮಕ್ಕಳಾಗಲ್ಲ ಎಂದು ಹೇಳುವ ಮೂಲಕ ಪ್ರಧಾನಿ ಮೋದಿ ಕೈಲಾಗದ ಗಂಡು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕಲಬುರಗಿಯ ಬಸವಕಲ್ಯಾಣದ ಎನ್ ವಿ ಕಾಲೇಜು ಮೈದಾನದಲ್ಲಿ ನಡೆದ ಕಾಂಗ್ರೆಸ್ ರ್ಯಾಲಿ ವೇಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸಮ್ಮುಖದಲ್ಲೇ ಶಾಸಕರು ತಮ್ಮ ಹರಕಲು ಬಾಯಿಯಿಂದ ಇಂತಹ ಹೇಳಿಕೆಯನ್ನು ನೀಡಿದ್ದಾರೆ. 
ಇದೇ ವೇಳೆ ಮಾತನಾಡಿದ ರಾಹುಲ್ ಗಾಂಧಿ ಅವರು, 'ಅನಿಲ್ ಅಂಬಾನಿಗೆ ಲಾಭ ಮಾಡಿಕೊಡಲು ರಫೇಲ್ ಒಪ್ಪಂದ ಮಾಡಿಕೊಂಡಿದ್ದಾರೆ. ಅದಾನಿಗೆ 6 ವಿಮಾನ ನಿಲ್ದಾಣಗಳನ್ನು ಬಿಟ್ಟುಕೊಟ್ಟಿದ್ದಾರೆ. ದೇಶದ ಜನತೆಯ ಉದ್ಯೋಗಾವಕಾಶಗಳನ್ನು ಪ್ರಧಾನಿ ಮೋದಿ ನುಂಗಿಹಾಕಿದ್ದಾರೆ' ಎಂದು ರಾಹುಲ್ ಆರೋಪಿಸಿದರು.

Advertisement

Advertisement

ರಫೇಲ್ ಒಪ್ಪಂದದ ಕುರಿತು ಸಿಬಿಐ ಮುಖ್ಯಸ್ಥರು ತನಿಖೆ ಕೈಗೊಳ್ಳಲು ನಿರ್ಧರಿಸಿದ್ದರು. ಆದರೆ, ಕಾವಲುಗಾರ ಮಧ್ಯರಾತ್ರಿ ಅವರನ್ನು ಸ್ಥಾನದಿಂದ ತೆರವುಗೊಳಿಸಿದರು. ಅವರಿಗೆ ಮತ್ತೆ ಹಿಂದಿನ ಸ್ಥಾನ ನೀಡುವಂತೆ ಸುಪ್ರೀಂಕೋರ್ಟ್ ಆದೇಶಿಸಿತು. ಮತ್ತೆ ಕಾವಲುಗಾರ ಅವರನ್ನು ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದರು ಎಂದು ರಾಹುಲ್ ಗಾಂಧಿ ಟೀಕಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement